ಖರ್ಗೆಗೆ ಎಐಸಿಸಿ ಕಾರ್ಯಾಧ್ಯಕ್ಷ ಸ್ಥಾನ..?

Mallikarjun Kharge

12-06-2019

ಸೋಲಿನಿಂದ ತತ್ತರಿಸಿರುವ ಕಾಂಗ್ರೆಸ್ ಗೆ ಹೊಸ ವರ್ಚಸ್ಸು ನೀಡಲು ಪಕ್ಷದ ನಾಯಕತ್ವ ಸಿದ್ದತೆ ನಡೆಸಿದೆ. ಇದಕ್ಕಾಗಿ ದೆಹಲಿಯಲ್ಲಿ ‌ಪ್ರಮುಖ ನಾಯಕರ ಸಭೆ ಆಯೋಜಿಸಲಾಗಿದೆ. ಪಕ್ಷದ ಅಧ್ಯಕ್ಷ ರಾಗಿ ಮುಂದುವರೆಯಲು ರಾಹುಲ್ ಗಾಂಧಿ ನಿರಾಕರಿಸಿರುವ ಹಿನ್ನೆಲೆಯಲ್ಲಿ ‌ಪಕ್ಷಕ್ಕೆ ಕಾರ್ಯಾಧ್ಯಕ್ಷರ ನೇಮಕಕ್ಕೆ ಚಿಂತನೆ ನಡೆದಿದೆ.

ಕಳೆದ ಅವದಿಯಲ್ಲಿ ‌ಪ್ರತಿಪಕ್ಷ ನಾಯಕನಾಗಿ ಉತ್ತಮ ಕಾರ್ಯ ನಿರ್ವಹಿಸಿದ ಖರ್ಗೆ ಅವರಿಗೆ ಈ ಹುದ್ದೆ ನೀಡುವ ಸಂಬಂಧ ಚರ್ಚೆ ನಡೆದಿದೆ.

ನವದೆಹಲಿಯಲ್ಲಿ ಇಂದು ಎಐಸಿಸಿ ಕಾರ್ಯಾಧ್ಯಕ್ಷರ ನೇಮಕ ಕುರಿತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ಹೀಗಾಗಿ ದೆಹಲಿಗೆ ಬರುವಂತೆ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬುಲಾವ್ ನೀಡಲಾಗಿದೆ. ಈ ಹಿನ್ನೆಲೆ ಮಲ್ಲಿಕಾರ್ಜುನ ಖರ್ಗೆ ದೆಹಲಿಗೆ ತೆರಳಿದ್ದಾರೆ. ಈ ಸಭೆಯಲ್ಲಿ ನೇಮಕ ಸಂಬಂಧಿಸಿದಂತೆ ನಿರ್ಧಾರ ಹೊರಬೀಳಲಿದೆ ಎನ್ನಲಾಗಿದೆ.


ಸಂಬಂಧಿತ ಟ್ಯಾಗ್ಗಳು

Mallikarjun Kharge Congress AICC Rahul Gandhi


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ