‘83’ ಚಿತ್ರಕ್ಕೆ ದೀಪಿಕಾಗೆ 14 ಕೋಟಿ ಸಂಭಾವನೆ..!

Deepika signs Ranveer Singh starrer

13-06-2019

ಕಬೀರ್ ಖಾನ್ ನಿರ್ದೇಶನದ ‘83’ ಚಿತ್ರದಲ್ಲಿ ನಟಿ ದೀಪಿಕಾ ಪಡುಕೋಣೆ ನಟಿಸುತ್ತಿದ್ದಾರೆ. 1983 ರಲ್ಲಿ ಭಾರತ ಕ್ರಿಕೆಟ್ ತಂಡ ವಿಶ್ವಕಪ್ ಗೆದ್ದಿರುವ ಕಥೆಯನ್ನಾಧರಿಸಿರುವ ಈ ಚಿತ್ರದಲ್ಲಿ ಕಪಿಲ್ ದೇವ್ ಪಾತ್ರದಲ್ಲಿ ನಟ ರಣವೀರ್ ಸಿಂಗ್ ಹಾಗೂ ರೋಮಿ ದೇವ್ ಪಾತ್ರದಲ್ಲಿ ದೀಪಿಕಾ ನಟಿಸುತ್ತಿದ್ದಾರೆ. ದಾಂಪತ್ಯ ಜೀವನಕ್ಕೆ ಕಾಲಿಸಿದ ಬಳಿಕ ತೆರೆ ಮೇಲೆ ಮತ್ತೆ ಜೋಡಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ ರಣವೀರ್ ಮತ್ತು ದೀಪಿಕಾ. ಅಲ್ಲದೇ ರಾಮ್ ಲೀಲಾ, ಭಾಜೀರಾವ್ ಮಸ್ತಾನಿ, ಪದ್ಮಾವತ್ ಬಳಿಕ ಇಬ್ಬರೂ ಜೋಡಿಯಾಗಿ ನಟಿಸುತ್ತಿರುವ ನಾಲ್ಕನೇ ಚಿತ್ರ ಇದು. ಈ ಮಧ್ಯೆ ದೀಪಿಕಾ ಪಡುಕೋಣೆ 83 ಚಿತ್ರಕ್ಕಾಗಿ ಬರೋಬ್ಬರಿ 14 ಕೋಟಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗಿದೆ.


ಸಂಬಂಧಿತ ಟ್ಯಾಗ್ಗಳು

Deepika Padukone Bollywood Ranveer Singh Actress


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ