ಐಎಂಎ ವಂಚನೆ: ಸರ್ಕಾರಕ್ಕೆ ಬದ್ದತೆಯಿಲ್ಲ ಎಂದ ಈಶ್ವರಪ್ಪ

Eshwarappa Statement

13-06-2019

ಶಿವಮೊಗ್ಗ: ಐಎಂಎ ಕಂಪನಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಕೆ.ಎಸ್ ಈಶ್ವರಪ್ಪ, ಸರ್ಕಾರಕ್ಕೆ ಕಣ್ಣು, ಕಿವಿ, ಹೃದಯ ಇಲ್ಲವೇ ಎಂದು ಪ್ರಶ್ನಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಎಂಎ ಮೂಲಕ 10 ಸಾವಿರ ಕೋಟಿಗೂ ಅಧಿಕ ವಂಚನೆ ಆಗಿದೆ. ಇದರಲ್ಲಿ ಅನೇಕ ರಾಜಕಾರಣಿಗಳು ಪ್ರಭಾವಿ ಸಚಿವರು ಪಾತ್ರವಿರುವುದು ಮಾಧ್ಯಮದಲ್ಲಿ ಬರುತ್ತಿದೆ. ಗೃಹ ಸಚಿವರು ಇಂತಹವರ ವಿರುದ್ಧ ಕ್ರಮಕ್ಕೆ ತೆಗೆದುಕೊಳ್ಳಲು ಕಾನೂನು ಇಲ್ಲ ಎಂಬ ಹೇಳಿಕೆಯಿಂದ ತಮಗೆ ನೋವಾಗಿದೆ ಎಂದು ಹೇಳಿದರು.


ಸಂಬಂಧಿತ ಟ್ಯಾಗ್ಗಳು

Eshwarappa IMA Shivmogga Government


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ