ನಾಳೆ ಸಂಪುಟ ವಿಸ್ತರಣೆ: ಯಾರಿಗೆ ಮಂತ್ರಿಗಿರಿ?

Karnataka Cabinet

13-06-2019

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಾಳೆ ನಡೆಯಲಿದ್ದು, ಪಕ್ಷೇತರ ಶಾಸಕರಿಬ್ಬರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜಭವನದ ಗಾಜಿನಮನೆಯಲ್ಲಿ ನಾಳೆ ಮಧ್ಯಾಹ್ನ 1 ಗಂಟೆಗೆ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದ್ದು ಪಕ್ಷೇತರ ಶಾಸಕರಾದ ಶಂಕರ್ ಹಾಗೂ ನಾಗೇಶ್ ಅವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಪ್ರಸ್ತುತ ಮೂರು ಸಚಿವ ಸ್ಥಾನಗಳು ಖಾಲಿ ಉಳಿದಿವೆ. ಆಡಳಿತ ಪಕ್ಷಗಳು ತಲಾ ಒಂದು ಸಚಿವ ಸ್ಥಾನವನ್ನು ಪಕ್ಷೇತರಿಗೆ ನೀಡಲು ಉದ್ದೇಶಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಜೆಡಿಎಸ್‍ನ ಇನ್ನೊಂದು ಸ್ಥಾನ ಯಾರಿಗೆ ನೀಡಲಾಗುತ್ತದೆ ಎಂಬುದು ತೀವ್ರ ಕುತೂಹಲ ಕೆರಳಿಸಿದ್ದು, ಪಕ್ಷದ ವರಿಷ್ಠರು ಇನ್ನೂ ಯಾವುದೇ ನಿರ್ಧಾರವನ್ನು ಪ್ರಕಟಿಸಿಲ್ಲ.

ವಿಧಾನಪರಿಷತ್ ಸದಸ್ಯ ಬಿ.ಎಂ.ಫಾರೂಖ್ ಅವರ ಹೆಸರು ಮುಂಚೂಣಿಯಲ್ಲಿದೆ. ಅಲ್ಲದೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಶಾಸಕ ಎಚ್.ವಿಶ್ವನಾಥ್ ಅವರ ಹೆಸರು ಕೂಡ ಪ್ರಸ್ತಾಪವಾಗುತ್ತಿದ್ದು, ಕೊನೆ ಗಳಿಗೆಯಲ್ಲಿ ಜೆಡಿಎಸ್ ಯಾರಿಗೆ ಸಚಿವ ಸ್ಥಾನವನ್ನು ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.


ಸಂಬಂಧಿತ ಟ್ಯಾಗ್ಗಳು

Cabinet Minister Government Rajbhavan


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ