ಮನ್ಸೂರ್ ತಪ್ಪಿನಿಂದ ವಿದ್ಯಾರ್ಥಿಗಳಿಗೆ ಭವಿಷ್ಯದ ಚಿಂತೆ

Mohammod Mansoor Khan Cheating

13-06-2019

ಜನರಿಗೆ ನೂರಾರು ಕೋಟಿ ರೂಪಾಯಿ ಪಂಗನಾಮ ಹಾಕಿರುವ ಐಎಂಎ ಸಂಸ್ಥೆ ಮಾಲೀಕ ಮನ್ಸೂರ್ ಖಾನ್ ನಾಪತ್ತೆಯಿಂದ ಆತ ದತ್ತು ಪಡೆದಿದ್ದ ಶಾಲೆಗೆ ರಜೆ ನೀಡಲಾಗಿದ್ದು ಅಲ್ಲಿನ 960 ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮನ್ಸೂರ್ ಖಾನ್ 2 ವರ್ಷಗಳ ಹಿಂದೆ ತಾನು ಪ್ರಾಥಮಿಕ ಶಿಕ್ಷಣ ಪಡೆದಿದ್ದ ಶಿವಾಜಿನಗರದ ಸರ್ಕಾರಿ ವಿಕೆಒ ಪಬ್ಲಿಕ್ ಶಾಲೆಯನ್ನು ದತ್ತು ಪಡೆದಿದ್ದ. ಈ ಶಾಲೆಗೆ ಐಎಂಎ ಸಂಸ್ಥೆಯ ಮೂಲಕ 76 ಶಿಕ್ಷಕರನ್ನು ನೇಮಿಸಿ ಖಾಸಗಿ ಸಂಸ್ಥೆಗಳು ನಾಚುವಂತೆ ಅಭಿವೃದ್ಧಿಪಡಿಸಿದ್ದ. ಹಳೆ ಕಟ್ಟಡದ ನವೀಕರಣಗೊಳಿಸಿ, ಶಾಲೆಗೆ ಕಂಪ್ಯೂಟರ್ ಗಳನ್ನು ನೀಡಿ ಹೈಟೆಕ್ ಶಾಲೆಯಂತೆ ರೂಪಿಸಿದ್ದ. ಶಾಲೆಯ ವಿನ್ಯಾಸ ಬದಲಾದ ನಂತರ ಶಾಲೆಗೆ ಸೇರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿತ್ತು.

ಭವಿಷ್ಯದ ಚಿಂತೆ

ಶಾಲೆಯಲ್ಲಿ ಕಿರಿಯ ಪ್ರಾಥಮಿಕ ತರಗತಿಯಿಂದ ಕಾಲೇಜು ಶಿಕ್ಷಣವರೆಗೆ ವಿದ್ಯಾರ್ಥಿಗಳು ಕಲಿಯುತ್ತಿದ್ದು  ಸರ್ಕಾರ ಇಬ್ಬರು ಶಿಕ್ಷಕರನ್ನು ನೇಮಿಸಿದ್ದು, ಇನ್ನುಳಿದ 76 ಶಿಕ್ಷಕರು ಮನ್ಸೂರ್ ಖಾನ್‍ನ ಐಎಂಎ ಸಂಸ್ಥೆ ಮೂಲಕ ನೇಮಕಗೊಂಡಿದ್ದರು. ಈಗ ಮನ್ಸೂರ್ ನಾಪತ್ತೆಯಾದ ಬೆನ್ನಲ್ಲೇ 56 ಶಿಕ್ಷಕರು ಶಾಲೆಗೆ ಬರಲು ಹಿಂದೇಟು ಹಾಕಿದ್ದಾರೆ.

ಶಾಲೆಯ ಶಿಕ್ಷಕರ ಮತ್ತು ಸಿಬ್ಬಂದಿ ವೇತನ ಸೇರಿದಂತೆ ಇತರೆ ವೆಚ್ಚಗಳಿಗೆ ಪ್ರತಿ ತಿಂಗಳು 32 ಲಕ್ಷ ಹಣವನ್ನು ಮನ್ಸೂರ್ ವಿನಿಯೋಗಿಸುತ್ತಿದ್ದರು ಎಂದು ಪ್ರಾಂಶುಪಾಲೆ ನಫೀವುನ್ನೀಸಾ ತಿಳಿಸಿದ್ದಾರೆ. ವಂಚನೆ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಐಎಂಎ ಸಂಸ್ಥೆಯಿಂದ ನೇಮಕಗೊಂಡಿರುವ ಶಿಕ್ಷಕರಿಗೆ ವೇತನ ಸಮಸ್ಯೆಯ ಜೊತೆ ಭವಿಷ್ಯದ ಚಿಂತೆ ಆರಂಭವಾಗಿದೆ. ನಮ್ಮ ಸಂಬಳ ಸಮಸ್ಯೆ ಇತ್ಯರ್ಥವಾಗುವವರೆಗೆ ಪಾಠ ಮಾಡುವುದಿಲ್ಲ ಎಂದು ಹಠ ಹಿಡಿದ ಹಿನ್ನೆಲೆಯಲ್ಲಿ ಶಾಲೆಗೆ ಅನಿವಾರ್ಯವಾಗಿ ರಜೆ ನೀಡಲಾಗಿದೆ.

ಇನ್ನಾದರೂ ಜನರು ಮಕ್ಕಳನ್ನು ಶಾಲೆಗಳಿಗೆ ಕಳುಹಿಸುವಾಗ ಸರಿಯಾದ ಶಾಲೆಗಳಿಗೆ ಕಳುಹಿಸುವಂತಾಗಲಿ.


ಸಂಬಂಧಿತ ಟ್ಯಾಗ್ಗಳು

VKO School IMA Mohammod Mansoor Khan Cheating Cheating


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ