ಸರ್ಕಾರ-ಜನರ ನಡುವೆ ನಿಕಟ ಸಂಪರ್ಕಕ್ಕೆ ಗ್ರಾಮವಾಸ್ತವ್ಯ : ಸಿ.ಎಂ

H D Kumaraswamy Statement

14-06-2019

ಬೆಂಗಳೂರು: ಗ್ರಾಮವಾಸ್ತವ್ಯ ಸಾಂಕೇತಿಕ. ಅದು ಜನಪ್ರಿಯತೆಗಾಗಿ ಮಾಡಿದ ಕಾರ್ಯಕ್ರಮವಲ್ಲ. ಗ್ರಾಮವಾಸ್ತವ್ಯದ ನೈಜ ಉದ್ದೇಶ ಸರ್ಕಾರ ಮತ್ತು ಜನತೆ ನಡುವೆ ನಿಕಟ ಸಂಪರ್ಕ ಸಾಧಿಸುವುದು. ಸ್ಥಳೀಯ ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಿಕೊಡುವುದು ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

21.06.2019 ರಂದು ಯಾದಗಿರಿ ಜಿಲ್ಲೆಯ ಗುರುಮಿಟ್‍ಕಲ್ ತಾಲೂಕಿನ ಚಂದರಕಿ ಗ್ರಾಮ, 22.06.2019ರಂದು ಅಫ್ಜಲ್‍ಪುರ ತಾಲ್ಲೂಕಿನ ಹೆರೂರು-ಬಿ ಗ್ರಾಮಗಳಲ್ಲಿ ಮತ್ತು 26.06.2019ರಂದು ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಕರಿಗುಡ್ಡ ಗ್ರಾಮ, 27.06.2019ರಂದು ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನ ಉಜಳಂಬ ಗ್ರಾಮಗಳಲ್ಲಿ ಆಯೋಜಿಸಿರುವ ಗ್ರಾಮವಾಸ್ತವ್ಯ ಕಾರ್ಯಕ್ರಮಗಳ ಪೂರ್ವಭಾವಿ ತಯಾರಿಗಾಗಿ ನಡೆದ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

“ಗ್ರಾಮವಾಸ್ತವ್ಯದ ಸಂದರ್ಭದಲ್ಲಿ ನನ್ನ ವಾಸ್ತವ್ಯಕ್ಕೆ ಪ್ರಾಮುಖ್ಯತೆ ನೀಡಬೇಕಿಲ್ಲ. ಸರಳ ಸಿದ್ಧತೆಗಳಾದರೆ ಸಾಕು” ಎಂದ ಅವರು “ಗ್ರಾಮವಾಸ್ತವ್ಯದ ಸಂದರ್ಭದಲ್ಲಿ ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು ನನ್ನಗುರಿ. ರಸ್ತೆ, ಕುಡಿಯುವ ನೀರು, ಶಾಲಾ ಕಾಲೇಜುಗಳ ಸುಧಾರಣೆಯ ಬಗೆಗೆ ನನ್ನ ಆದ್ಯತೆ. ಈ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಿಕೊಡುವುದು ನನ್ನ ಧ್ಯೇಯ” ಎಂದು ನುಡಿದರು.


ಸಂಬಂಧಿತ ಟ್ಯಾಗ್ಗಳು

H D Kumaraswamy Yadgiri Government Bidar


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ