ಮತ್ತೆ ಲೋಕಸಭಾ ಚುನಾವಣೆ: ತುರ್ತು ವಿಚಾರಣೆಗೆ ಸುಪ್ರೀಂ ನಕಾರ

Supreme Court

14-06-2019

ದೆಹಲಿ: ಹಿರಿಯ ವಕೀಲ ಮನೋಹರ್ ಶರ್ಮಾ, 2019ರ ಲೋಕಸಭೆ ಚುನಾವಣೆಯನ್ನು ರದ್ದುಪಡಿಸಿ, ಹೊಸದಾಗಿ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಬೇಕು ಎಂದು ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಇಂದು ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಅರ್ಜಿಯ ತುರ್ತು ವಿಚಾರಣೆ ಸಾಧ್ಯವಿಲ್ಲ ಎಂದಿದೆ.

ನಿನ್ನೆ ಸುಪ್ರೀಂ ಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿದ್ದ ಶರ್ಮಾ, ಜನಪ್ರತಿನಿಧಿಗಳ ಕಾಯ್ದೆಯ ಅನ್ವಯ ಚುನಾವಣಾ ಆಯೋಗಕ್ಕೆ ಇವಿಎಂಗಳ ಮೂಲಕ ಚುನಾವಣೆ ನಡೆಸುವ ಅಧಿಕಾರವಿಲ್ಲ. ಬ್ಯಾಲೆಟ್ ಪೇಪರ್ ಮೂಲಕವೇ ಚುನಾವಣೆಯನ್ನು ನಡೆಸಬೇಕು ಎಂದು ವಾದಿಸಿದ್ದರು. ಅಲ್ಲದೇ, 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಇವಿಎಂಗಳನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಕೂಡ ಅವರು ಆರೋಪಿಸಿದ್ದರು.


ಸಂಬಂಧಿತ ಟ್ಯಾಗ್ಗಳು

Supreme Court Loksabha Election Ballet paper Loksabha Election


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ