ಸಾಫ್ಟ್ ವೇರ್ ಇಂಜಿನಿಯರ್ ನೇಣಿಗೆ ಶರಣು

software engineer suicides in banglore

14-06-2019

ಬೆಂಗಳೂರು: ಜೀವನದ ಬಗ್ಗೆ ಜಿಗುಪ್ಸೆ ಹೊಂದಿದ ಖಾಸಗಿ ಕಂಪನಿಯ ಕೇರಳ ಮೂಲದ ಸಾಫ್ಟ್ವೇರ್ ಇಂಜಿನಿಯರೊಬ್ಬರು ನೇಣಿಗೆ ಶರಣಾಗಿರುವ ದಾರುಣ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೇರಳ ಮೂಲದ ಗೋಪುದಾಸ್ (29) ಎಂದು ಗುರುತಿಸಲಾಗಿದೆ. ಖಾಸಗಿ ಕಂಪನಿಯೊಂದರಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದ ಗೋಪುದಾಸ್ ಐದು ವರ್ಷಗಳ ಹಿಂದೆ ನಗರದ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದ ಸುನಂದ ಎಂಬುವವರನ್ನು ಪ್ರೀತಿಸಿ ವಿವಾಹವಾಗಿದ್ದರು. ಎಂದಿನಂತೆ ಸುನಂದ ಕೆಲಸಕ್ಕೆ ಹೋಗಿದ್ದು, ಗೋಪುದಾಸ್ ಕೆಲಸಕ್ಕೆ ಹೋಗದೆ ಮನೆಯಲ್ಲೇ ಉಳಿದುಕೊಂಡಿದ್ದರು. ಸುನಂದ ಕೆಲಸ ಮುಗಿಸಿಕೊಂಡು ಮನೆಗೆ ಬಂದಾಗ ಮುಂಬಾಗಿಲಿಗೆ ಚಿಲಕ ಹಾಕಲಾಗಿತ್ತು. ಎಷ್ಟು ಬಾರಿ ಬಾಗಿಲು ಬಡಿದರೂ ತೆಗೆಯದಿದ್ದರಿಂದ ಆತಂಕಗೊಂಡ ಆಕೆ ಬಾಗಿಲು ಹೊಡೆದು ಒಳಹೋಗಿ ನೋಡಿದಾಗ ಗೋಪುದಾಸ್ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಡೆತ್ ನೋಟ್ ನಲ್ಲಿ ನನ್ನನ್ನು ಕ್ಷಮಿಸಿ, ನನ್ನ ಸಾವಿಗೆ ನಾನೇ ಹೊಣೆ ಎಂದು ಬರೆದಿಟ್ಟಿದ್ದಾರೆ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಪೋಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. 


ಸಂಬಂಧಿತ ಟ್ಯಾಗ್ಗಳು

bengaluru software engineer suicide kerala


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ