ಅಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ

BJP to sit on dharna

14-06-2019

ಬೆಂಗಳೂರು: ಜಿಂದಾಲ್ ಕಂಪನಿಗೆ ಸಾವಿರಾರು ಎಕರೆ ಭೂಮಿ ನೀಡುವುದನ್ನು ವಿರೋಧಿಸಿ ಬಿಜೆಪಿ ನಗರದಲ್ಲಿ ಇಂದು ಅಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭಿಸಿದೆ. 
ನಗರದ ಆನಂದರಾವ್ ವೃತ್ತದ ಗಾಂಧಿ ಪ್ರತಿಮೆ ಬಳಿ ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ನೇತೃತ್ವದಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿಯಲ್ಲಿ ಕೆ.ಎಸ್. ಈಶ್ವರಪ್ಪ, ಆರ್. ಅಶೋಕ್, ಗೋವಿಂದರಕಾರಜೋಳ, ಬಿ. ಶ್ರೀರಾಮೂಲು, ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ,ಸಂಸದೆ ಶೋಭಾಕರಂದ್ಲಾಜೆ ಶಾಸಕರಾದ  ಸಿ.ಟಿ. ರವಿ, ಎನ್.ರವಿಕುಮಾರ್ ಸೇರಿದಂತೆ ಬಿಜೆಪಿಯ ಲೋಕಸಭಾ, ರಾಜ್ಯಸಭಾ, ವಿಧಾನಸಭಾ ಹಾಗೂ ವಿಧಾನಪರಿಷತ್ ಸದಸ್ಯರುಗಳು ಪಾಲ್ಗೊಂಡಿದ್ದರು. 
ಜಿಂದಾಲ್ ಕಂಪೆನಿಗೆ 3600 ಎಕರೆ ಭೂಮಿ ಪರಭಾರೆ ಮಾಡಿರುವ ಹಿಂದೆ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆದಿದೆ. ಕೂಡಲೇ ಸರ್ಕಾರ ಈ ಭೂಮಿ ಪರಭಾರೆಯನ್ನು ರದ್ದು ಮಾಡಬೇಕು ಎಂದು ಇದೇ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ಆಗ್ರಹಿಸಿದರು. 
ರಾಜ್ಯದಲ್ಲಿ ಬರ ಪರಿಸ್ಥಿತಿ ತಾಂಡವವಾಡುತ್ತಿದೆ. ಸರ್ಕಾರ ಬರ ನಿರ್ವಹಣೆಯಲ್ಲಿ ವಿಫಲವಾಗಿದೆ ಎಂದು ಅವರು ದೂರಿದರು. ಈ ಸರ್ಕಾರ ಜನರ ಪಾಲಿಗೆ ಸತ್ತಂತಾಗಿದೆ. ಈ ಸರ್ಕಾರ ಇದ್ದು ಪ್ರಯೋಜನವಿಲ್ಲ ಎಂದು ಅವರು ಹರಿಹಾಯ್ದರು. 
 


ಸಂಬಂಧಿತ ಟ್ಯಾಗ್ಗಳು

bjp protest jindal karnataka government


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ