ಕಾಂಗ್ರೆಸ್ ಸಿಎಂಗಳ ಜೊತೆ ಮನಮೋಹನ್ ಸಿಂಗ್ ಸಭೆ

Manmohan Singh meets Congress CMs

15-06-2019

ದೆಹಲಿ: ಇಂದು ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳ ಸಿಎಂಗಳೊಂದಿಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮಾತುಕತೆ ನಡೆಸಲಿದ್ದಾರೆ. ರಾಜ್ಯಗಳ ಅಭಿವೃದ್ಧಿ, ಮುಂಬರುವ ದಿನಗಳಲ್ಲಿ ಪಕ್ಷ ಸಂಘಟನೆ, ಚುನಾವಣೆಗೆ ಪೂರಕವಾಗಿ ಜಾರಿಗೆ ತರಬೇಕಿರುವ ಜನಪರ ಯೋಜನೆಗಳು, ಯೋಜನೆಗಳ ಅನುಷ್ಠಾನ ಇತ್ಯಾದಿ ವಿಷಯಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ.

ಸದ್ಯಕ್ಕೆ ಕೇಂದ್ರಾಡಳಿತ ಪ್ರದೇಶವಾದ ಪುದುಚೆರಿ, ಪಂಜಾಬ್, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‍ಘಡದಲ್ಲಿ ಕಾಂಗ್ರೆಸ್ ಸಿಎಂಗಳು ಅಧಿಕಾರದಲ್ಲಿದ್ದಾರೆ. ಪಕ್ಷದ ಕೇಂದ್ರ ಕಚೇರಿಯಲ್ಲಿ ನಡೆಯಲಿರುವ ಪುದುಚೆರಿ ಸಿಎಂ ನಾರಾಯಣ ಸ್ವಾಮಿ, ಪಂಜಾಬ್ ಸಿಎಂ ಅಮರಿಂದರ್ ಸಿಂಗ್, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಮಧ್ಯಪ್ರದೇಶ ಸಿಎಂ ಕಮಲನಾಥ್, ಜಾರ್ಖಂಡ್ ಸಿಎಂ ಭೂಪೇಶ್ ಬಘೇಲ್ ಇಂದಿನ ಸಭೆಯಲ್ಲಿ ಭಾಗವಹಿಸಲಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Manmohan Singh Congress Election Politics


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ