ವೈದ್ಯರ ಮುಷ್ಕರ ; ಬಹುತೇಕ ಆಸ್ಪತ್ರೆಗಳ ಓಪಿಡಿ ಬಂದ್

Doctors Strike

17-06-2019

ಬೆಂಗಳೂರು: ವೈದ್ಯರ ಸುರಕ್ಷತೆಗಾಗಿ ದೇಶದ್ಯಾಂತ ಏಕರೂಪ ಕಾನೂನು ಜಾರಿ, ವೈದ್ಯರಿಗೆ ಸೂಕ್ತ ಭದ್ರತೆ, ವೈದ್ಯರ ಮೇಲೆ ಹಲ್ಲೆ ಪ್ರಕರಣಗಳಿಗೆ ಕಡಿವಾಣ ಹಾಕಲುಕಾನೂನು ಜಾರಿಗೆ ತರಬೇಕು ಮುಂತಾದ ಬೇಡಿಕೆಗಳೊಂದಿಗೆ ಹಾಗೂ ಪಶ್ಚಿಮ ಬಂಗಾಳದಲ್ಲಿ ವೈದ್ಯರ ಮೇಲಿನ ಹಲ್ಲೆ ಖಂಡಿಸಿ ದೇಶಾದ್ಯಂತ ವೈದ್ಯರು ಮುಷ್ಕರ ನಡೆಸುತ್ತಿದ್ದಾರೆ. ಭಾರತೀಯ ವೈದ್ಯಕೀಯ ಸಂಸ್ಥೆ ಪ್ರತಿಭಟನೆಗೆ ಕರೆಕೊಟ್ಟಿದ್ದು, ರಾಜ್ಯದಲ್ಲೂ ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದರಿಂದಾಗಿ ರಾಜ್ಯದ ಸರ್ಕಾರಿ ಮತ್ತು ಖಾಸಗಿಆಸ್ಪತ್ರೆಗಳಲ್ಲಿ ವೈದ್ಯಕೀಯ ಸೇವೆ ವ್ಯತ್ಯಯವಾಗಿದೆ.  ರಾಜ್ಯದ ಎಲ್ಲ ಆಸ್ಪತ್ರೆಗಳ ಓಪಿಡಿ ಸ್ತಬ್ಧವಾಗಿವೆ.
ವೈದ್ಯಕೀಯ ಕಾನೂನು ಉಲ್ಲಂಘನೆ ಮಾಡಿದವರಿಗೆ 7 ವರ್ಷಗಳ ಕಠಿಣ ಶಿಕ್ಷೆ ವಿಧಿಸಬೇಕು. ಆಸ್ಪತ್ರೆಗಳಿಗೆ ಮೂಲ ಸೌಲಭ್ಯ ಕಲ್ಪಿಸಬೇಕು. ಹಾಗೂ ಪೊಲೀಸ್ ಸಿಬ್ಬಂದಿನೇಮಿಸಬೇಕು. ಅಲ್ಲದೆ ಸಿಎಂ ಮಮತಾ ಬ್ಯಾನರ್ಜಿ ವೈದ್ಯರಲ್ಲಿ ಬಹಿರಂಗ ಕ್ಷಮೆಯಾಚನೆ ಮಾಡಬೇಕು ಎಂಬುದು ವೈದ್ಯರ ಬೇಡಿಕೆಗಳಾಗಿವೆ.
ಪಶ್ಚಿಮ ಬಂಗಾಳದಲ್ಲಿ ಸೋಮವಾರ ರಾತ್ರಿ ನಡೆದಿದ್ದ ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಭಾರತೀಯ ವೈದ್ಯಕೀಯ ಸಂಘ ದೇಶಾದ್ಯಂತ ವೈದ್ಯರ ಮುಷ್ಕರಕ್ಕೆ ಕರೆಕೊಟ್ಟಿದೆ. ಕರ್ನಾಟಕದ ವೈದ್ಯರು ಕೂಡ ‘ಸೇವ್ ಡಾಕ್ಟರ್ಸ್’ ಘೋಷಣೆಯಡಿ ಪ್ರತಿಭಟನೆ ನಡೆಸುತ್ತಿದ್ದಾರೆ.
ರಾಜ್ಯದ್ಯಾಂತ ಸುಮಾರು 4500 ಖಾಸಗಿ ಆಸ್ಪತ್ರೆಗಳ ಓಪಿಡಿ ಬಂದ್ ಆಗಲಿದೆ. ಬೆಳಗ್ಗೆ 6 ಗಂಟೆಯಿಂದ ನಾಡಿದ್ದು ಬೆಳಗ್ಗೆ 6 ಗಂಟೆವರೆಗೆ ಬಹುತೇಕ ಬಂದ್ ಇರಲಿದ್ದು, ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳು ಸೇರಿ ಒಟ್ಟು 600 ಆಸ್ಪತ್ರೆಗಳ ಓಪಿಡಿ ಬಂದ್ ಆಗಿರಲಿದೆ.


ಸಂಬಂಧಿತ ಟ್ಯಾಗ್ಗಳು

Doctors Strike OPD Strike Patients


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ