ನೀರವ್ ಮೋದಿ ದೇಶಭ್ರಷ್ಟ: ಅರ್ಜಿ ವಿಚಾರಣೆಗೆ ಕೋರ್ಟ್ ಅಂಗೀಕಾರ

Nirav Modi

17-06-2019

ಮುಂಬೈ: ಪಿಎನ್‍ಬಿ ಬ್ಯಾಂಕ್‍ನಿಂದ ಸಾಲ ಮಾಡಿ ಪರಾರಿಯಾಗಿರುವ ಉದ್ಯಮಿ ನೀರವ್ ಮೋದಿಯವರನ್ನು ದೇಶಭ್ರಷ್ಟ ಎಂದು ಘೋಷಿಸಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ನಡೆಸಲು ಮುಂಬೈನ ಸಿಟಿ ಸಿವಿಲ್ ಸೆಷನ್ಸ್ ಕೋರ್ಟ್ ಅಂಗೀಕರಿಸಿದೆ. ನೀರವ್ ಮೋದಿಯ ಪರ ವಕೀಲರು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯಡಿ ಕೋರ್ಟ್ ನಿರ್ಧರಿಸುವೆಡೆಯಲ್ಲೇ ವಿಚಾರಣೆ ನಡೆಯಬೇಕು ಎಂದು ಅರ್ಜಿ ಸಲ್ಲಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಕೋರ್ಟ್, ನೀರವ್ ಮೋದಿ ವಕೀಲರಿಗೆ ನೊಟೀಸ್ ನೀಡಿ, ವಿವರಣೆ ಕೋರಿದ್ದು, ವಿಚಾರಣೆಯನ್ನು ಜೂನ್ 25ಕ್ಕೆ ಮುಂದೂಡಿದೆ.


ಸಂಬಂಧಿತ ಟ್ಯಾಗ್ಗಳು

Nirav Modi Session Court Mumbai


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ