ಕರ್ತವ್ಯಕ್ಕೆ ಹಾಜರಾಗಲು ವೈದ್ಯರಿಗೆ ಸಿಎಂ ಮನವಿ

H D kumaraswamy Statement

17-06-2019

ಬೆಂಗಳೂರು: ವೈದರ ಮೇಲೆ ಹಲ್ಲೆ ಖಂಡನೀಯ. ಆದರೆ, ವೈದ್ಯರು ಮುಷ್ಕರ ನಿರತರಾದರೆ ಸಹಸ್ರಾರು ರೋಗಿಗಳಿಗೆ ತೊಂದರೆಯಾಗುತ್ತದೆ ಎಂದು ಸಿಎಂ ಎಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ಈಗಾಗಲೇ ಹಲವು ಆಸ್ಪತ್ರೆಗಳಲ್ಲಿ ರೋಗಿಗಳಿಗೆ ತೊಂದರೆಯಾಗಿದೆ. ಮುಷ್ಕರವನ್ನು ನಿರ್ಬಂಧಿಸಿ ರಾಜ್ಯ ಸರ್ಕಾರ ಮೂರು ದಿನಗಳ ಹಿಂದೆಯೇ ಸುತ್ತೋಲೆ ಹೊರಡಿಸಿದೆ. ಕೂಡಲೇ ವೈದ್ಯರು ಕರ್ತವ್ಯಕ್ಕೆ ಹಾಜರಾಗಬೇಕು ಎಂದಿರುವ ಅವರು, #SaveTheDoctors ಹ್ಯಾಷ್‍ಟ್ಯಾಗ್‍ನಡಿ ಟ್ವೀಟ್ ಮಾಡಿದ್ದಾರೆ. ಈ ಮೂಲಕ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಯವರ ವಿರುದ್ಧ ರಾಜ್ಯದಲ್ಲಿ ಮುಷ್ಕರ ನಿರತ ವೈದ್ಯರಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ಮನವಿ ಮಾಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Doctors Strike Mamata Banjarjee West Bengal H D kumaraswamy


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ