ಕೋಲ್ಕತ್ತಾ ಆಸ್ಪತ್ರೆಯಲ್ಲಿ ರೋಗಿಗಳ ಸರದಿ ಸಾಲು

NRS Hospital Kolkata

18-06-2019

ಕೊಲ್ಕೊತ್ತಾ: ವೈದ್ಯರ ಮೇಲೆ ಕುಟುಂಬಸ್ಥರು ನಡೆಸಿದ ಹಲ್ಲೆಯ ಕಾರಣಕ್ಕೆ ರಾಷ್ಟ್ರದಾದ್ಯಂತ ದೊಡ್ಡ ಸುದ್ದಿಯಾಗಿದ್ದ ಕೊಲ್ಕೊತ್ತಾದ ಎನ್‍ಆರ್‍ಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಇದೀಗ ಚಿಕಿತ್ಸೆ ಆರಂಭವಾಗಿದೆ. ನಿನ್ನೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ನಡೆಸಿದ ಸಂಧಾನ ಯಶಸ್ವಿಯಾದ ಬೆನ್ನಲ್ಲೇ ವೈದ್ಯರು ಪ್ರತಿಭಟನೆ ನಿಲ್ಲಿಸಿ ಕರ್ತವ್ಯಕ್ಕೆ ಹಾಜರಾದರು. ಇಷ್ಟು ದಿನ ಚಿಕಿತ್ಸೆ ಸಿಗದೆ ಪರದಾಡಿದ್ದ ಜನ ಇಂದು ಸರದಿ ಸಾಲಿನಲ್ಲಿ ನಿಂತು ಚಿಕಿತ್ಸೆ ಪಡೆಯುತ್ತಿದ್ದಾರೆ.

ವೈದ್ಯರ ಮೇಲಿನ ಹಲ್ಲೆ ಖಂಡಿಸಿ ರಾಷ್ಟ್ರದಾದ್ಯಂತ ಸರ್ಕಾರಿ ವೈದ್ಯರು ಚಿಕಿತ್ಸೆ ನಿಲ್ಲಿಸಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಈ ಸಂಬಂಧ ಸರ್ಕಾರಿ ವೈದ್ಯರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಅಲೋಕ್ ಶ್ರೀವತ್ಸ ಎಂಬುವವರು ಸುಪ್ರೀಂ ಕೋರ್ಟ್ ಮೆಟ್ಟಿಲನ್ನೂ ಏರಿದ್ದರು. ಇವರಿಗೆ ಭಾರತೀಯ ವೈದ್ಯಕೀಯ ಸಂಘ ಬೆಂಬಲ ನೀಡಿ, ಈ ಪ್ರಕರಣದಲ್ಲಿ ಮಧ್ಯಪ್ರವೇಶಿಸಿತ್ತು. ಆದರೆ, ಇಂದು ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಕೋರ್ಟ್‍ನ ರಜಾ ಕಾಲ ಮುಗಿದ ನಂತರ ಸೂಕ್ತ ಪೀಠವೇ ಅರ್ಜಿಯ ವಿಚಾರಣೆ ನಡೆಸಲಿದೆ ಎಂದು ಹೇಳಿದೆ.


ಸಂಬಂಧಿತ ಟ್ಯಾಗ್ಗಳು

NRS Hospital Patients Kolkata Doctors


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ