ಆತ್ಮಹತ್ಯೆಗೆ ಶರಣಾದ ರೈತನ ಕುಟುಂಬಕ್ಕೆ 5 ಲಕ್ಷ ಪರಿಹಾರ

HD Kumaraswamy

18-06-2019

ಮಂಡ್ಯ: ಮಂಡ್ಯ ಜಿಲ್ಲೆಯ ಅಘಾಲಯದಲ್ಲಿ ನೀರಿನ ಕೊರತೆ ಇದೆ ಎಂದು ವಿಡಿಯೋ ಸಂದೇಶ ಕಳಿಸಿದ ನಂತರ ಆತ್ಮಹತ್ಯೆಗೆ ಶರಣಾಗಿದ್ದ ರೈತನ ಮನೆಗೆ ಇಂದು ಸಿಎಂ ಎಚ್ ಡಿ ಕುಮಾರಸ್ವಾಮಿ ಭೇಟಿ ನೀಡಿದರು. ಅಲ್ಲದೇ, ರೈತನ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರವನ್ನೂ ಘೋಷಿಸಿದರು.

ಇದೇ ವೇಳೆ ಮಾತನಾಡಿದ ಕುಮಾರಸ್ವಾಮಿ, ಕೆರೆಯನ್ನು ತುಂಬಿಸುವಂತೆ ಒತ್ತಾಯಿಸಿದ ರೈತ ಸುರೇಶ್ ಅವರ ಸಾವಿನಿಂದ ನನಗೆ ತುಂಬಾ ನೋವಾಗಿದೆ. ಯಾವುದೇ ಕೆಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು ಎಂದು ನಾನು ರೈತರಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ಮುಂದಿನ ವಾರದಿಂದ ಅಧಿಕಾರಿಗಳು ಹಳ್ಳಿಗಳಿಗೆ ಭೇಟಿ ನೀಡಿ, ಅಲ್ಲೇ ಉಳಿದುಕೊಂಡು ಜನರ ಸಮಸ್ಯೆಗಳನ್ನು ಪರಿಹರಿಸುತ್ತಾರೆ ಎಂದು ಭರವಸೆ ನೀಡಿದರು.


ಸಂಬಂಧಿತ ಟ್ಯಾಗ್ಗಳು

HD Kumaraswamy Suicide Farmer Mandya


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ