ಹಿರಿಯರ ಬಂಡಾಯ: ವರಿಷ್ಠರನ್ನು ಭೇಟಿಯಾದ ಸಿದ್ದರಾಮಯ್ಯ

Siddaramaih Meets Congress leaders

18-06-2019

ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಹಿರಿಯರನ್ನು ಕಡೆಗಣಿಸಲಾಗುತ್ತಿದೆ ಎಂಬ ಆರೋಪಗಳ ಬೆನ್ನಲ್ಲೇ ಮಾಜಿ ಸಿ.ಎಂ.ಸಿದ್ದರಾಮಯ್ಯ ದೆಹಲಿಯಲ್ಲಿ ವರಿಷ್ಠರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ರಾಜ್ಯ ಕಾಂಗ್ರೆಸ್ ನಲ್ಲಿ ಹಿರಿಯರನ್ನು ಕಡೆಗಣಿಸಲಾಗುತ್ತಿದೆ ಯಾರೂ ನಮ್ಮ ಅಹವಾಲು ಕೇಳಲು ಮುಂದೆ ಬರುತ್ತಿಲ್ಲ. ಇದೇ ಪರಿಸ್ಥಿತಿ ಮುಂದುವರೆದಲ್ಲಿ ಮುಂದೆ ಯಾವುದೇ ರೀತಿಯ ಏರಿಳಿತಗಳಾದರೂ ಅದಕ್ಕೆ ನಾವು ಹೊಣೆ ಅಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕರು ವರಿಷ್ಠರಿಗೆ ರವಾನಿಸಿದ್ದರು. ಮೊನ್ನೆಯಷ್ಟೆ ದೆಹಲಿಯಲ್ಲಿ ಸಭೆ ನಡೆಸಿದ ಕೆಲವು ಹಿರಿಯ ಕಾಂಗ್ರೆಸ್ ನಾಯಕರು ಸಮ್ಮಿಶ್ರ ಸರ್ಕಾರದಲ್ಲಿನ ಲೋಪದೋಷಗಳನ್ನು ಬಿಡಿಬಿಡಿಯಾಗಿ ಬಿಚ್ಚಿಟ್ಟಿದ್ದು, ಪರಿಸ್ಥಿತಿ ಹೀಗೇ ಮುಂದುವರೆದರೆ ಕಾಂಗ್ರೆಸ್‍ಗೆ ತೀವ್ರ ಹಿನ್ನಡೆಯಾಗಲಿದೆ ಎಂಬ ಆತಂಕ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ದೆಹಲಿಯಲ್ಲಿ ವರಿಷ್ಠರನ್ನು ಭೇಟಿ ಮಾಡಿದರು.

ಮಾಜಿ ಸಿಎಂ ಸಿದ್ದರಾಮಯ್ಯ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜತೆ ಸಭೆ ನಡೆಸಿದರೆ, ಸಚಿವ ಡಿ.ಕೆ. ಶಿವಕುಮಾರ್ ರಾಜ್ಯದ ಸಂಸದರಿಗೆ ಔತಣಕೂಟ ಆಯೋಜಿಸಿದ್ದಾರೆ. ಸಂಸದ ಡಿ.ಕೆ. ಸುರೇಶ್ ನಿವಾಸದಲ್ಲಿ ಔತಣಕೂಟ ನಡೆಯಲಿದ್ದು, ಬಹುತೇಕ ಎಲ್ಲ ಸಂಸದರು ಪಾಲ್ಗೊಳ್ಳುವ ನಿರೀಕ್ಷೆ ಇದೆ.


ಸಂಬಂಧಿತ ಟ್ಯಾಗ್ಗಳು

Siddaramaih Delhi Congress Rahul Gandhi


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ