ಆರ್ ಎಸ್ ಎಸ್ ನ ಕೇಶವಕೃಪಾದಲ್ಲಿ ಮಹತ್ವದ ಸಭೆ

BJP Meeting In Keshavakrupa

18-06-2019

ಬೆಂಗಳೂರು: ಚಾಮರಾಜಪೇಟೆಯ ಆರ್‍ಎಸ್‍ಎಸ್‍ ಕಚೇರಿ ಕೇಶವಕೃಪಾದಲ್ಲಿ ರಾಜ್ಯ ಬಿಜೆಪಿ ನಾಯಕರು ಹಾಗೂ ಆರ್‍ಎಸ್‍ಎಸ್ ನಾಯಕರ ನಡುವೆ ಮಹತ್ವದ ಸಭೆ ನಡೆಯಿತು.

ಆರ್‍ಎಸ್‍ಎಸ್ ಜೊತೆ ರಾಜ್ಯ ಬಿಜೆಪಿ ನಾಯಕರ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ.ರವಿ, ಎನ್.ರವಿಕುಮಾರ, ಮಾಜಿ ಡಿಸಿಎಂ ಆರ್.ಅಶೋಕ್ ಸೇರಿದಂತೆ ಬಿಜೆಪಿ ಪ್ರಮುಖರು ಭಾಗಿಯಾಗಿದ್ದರು.

ಕಳೆದ ಮೂರು ತಿಂಗಳಿಂದ ಪಕ್ಷದ ಕಾರ್ಯಚಟುವಟಿಕೆಗಳ ಬಗ್ಗೆ ವರದಿ ನೀಡಲಿರುವ ಬಿಜೆಪಿ ನಾಯಕರು ಪಕ್ಷದ ಮುಂದಿನ ಕಾರ್ಯ ಚಟುವಟಿಕೆ, ಸದಸ್ಯತ್ವ ಅಭಿಯಾನ ಸೇರಿದಂತೆ ಪ್ರಮುಖ ವಿಚಾರಗಳ ಕುರಿತು ಸಮಾಲೋಚನೆ ನಡೆಸಿದ್ದಾರೆ. ಜಿಂದಾಲ್‍ಗೆ ಸರ್ಕಾರಿ ಭೂಮಿ ಮಾರಾಟ ವಿರೋಧಿಸಿ ನಡೆಸಿದ ಹೋರಾಟ, ಮುಂದಿನ ನಡೆ ಕುರಿತು ಸಹ ಚರ್ಚೆ ನಡೆದಿದೆ ಎನ್ನಲಾಗಿದೆ.


ಸಂಬಂಧಿತ ಟ್ಯಾಗ್ಗಳು

RSS Meeting KeshavaKrupa BJP


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ