ವೈಯ್ಯಾಲಿಕಾವಲ್ ನಲ್ಲಿ ಯುವಕನ ಕೊಚ್ಚಿ ಕೊಲೆ

Murder in Bengaluru

18-06-2019

ಬೆಂಗಳೂರು: ಯುವಕನೊಬ್ಬನನ್ನು ಮಚ್ಚು, ಲಾಂಗ್‍ಗಳಿಂದ ಕೊಚ್ಚಿ ಕೊಲೆ ಮಾಡಿರುವ ಭೀಕರ ಘಟನೆ ವೈಯ್ಯಾಲಿಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಸೋಮವಾರ ರಾತ್ರಿ ನಡೆದಿದೆ. ಮಲ್ಲೇಶ್ವರಂನ ಮುನೇಶ್ವರ ಲೇಔಟ್‍ನ ಗಣೇಶ್ (31)ಎಂದು ಕೊಲೆಯಾದವನೆಂದು ಗುರುತಿಸಲಾಗಿದೆ. ಮಲ್ಲೇಶ್ವರಂನ 9ನೇ ಕ್ರಾಸ್ ಬಳಿ ರಾತ್ರಿ ಬೈಕ್‍ನಲ್ಲಿ ಬಂದ ಮೂವರು ದುಷ್ಕರ್ಮಿಗಳು, ಗಣೇಶ್‍ನನ್ನು ಮಚ್ಚು, ಲಾಂಗ್‍ಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆ. ಎಲೆಕ್ಟ್ರೀಷನ್ ಕೆಲಸ ಮಾಡುತ್ತಿದ್ದ ಗಣೇಶ್ ಅವಿವಾಹಿತನಾಗಿದ್ದು, ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ನಡೆದಿದೆ ಎಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಗಣೇಶ್, ಕೆಲ ಹುಡುಗರ ಜೊತೆ ಗಲಾಟೆ ಮಾಡಿಕೊಂಡಿದ್ದು, ಕೊಲೆಗೆ ಅದೇ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಕೊಲೆ ನಡೆದ ಸ್ಥಳಕ್ಕೆ ಧಾವಿಸಿರುವ ವೈಯ್ಯಾಲಿಕಾವಲ್ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Murder Vayyalikaval Police case Malleshwaram


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ