ಎಸ್‍ಟಿಪಿ ದುರಂತ: ಘಟನಾ ಸ್ಥಳಕ್ಕೆ ಜಿ ಪರಮೇಶ್ವರ್ ಭೇಟಿ

G parameshwar visits STP

19-06-2019

ಬೆಂಗಳೂರು: ಅಮೃತಹಳ್ಳಿಯ ಜೋಗಪ್ಪ ಲೇಔಟ್‍ನ ನೀರು ಸಂಸ್ಕರಣಾ ಘಟಕ(ಎಸ್‍ಟಿಪಿ) ದುರಂತ ಸಂಬಂಧ ಈಗಾಗಲೇ ತನಿಖೆ ನಡೆಸಲಾಗುತ್ತಿದ್ದು, ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಹೇಳಿದರು.

ದುರಂತದ ಸ್ಥಳಕ್ಕೆ ಭೇಟಿ ನೀಡಿದ ಅವರು, ಸ್ಥಳ ಪರಿಶೀಲನೆ ಮಾಡಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಅವರು ದುರಂತ ನಡೆಯಲು  ಏನು ದೋಷವಾಗಿದೆ ಎಂಬುದು ತನಿಕೆಯಿಂದಲೇ ಸತ್ಯ ತಿಳಿಯಲು ಸಾಧ್ಯ. ತನಿಖೆಗೆ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಸೈನ್ ಹಾಗೂ ಕೇಂದ್ರದ ಇಲಾಖೆಯಿಂದಲೂ ತಾಂತ್ರಿಕ ದೋಷದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದರು

ಎಸ್‍ಟಿಪಿ ನಿರ್ಮಾಣದ ಹಂತದ ವೇಳೆ ಮೂರು ಜನ ಎಂಜಿನಿಯರ್‍ಗಳು ಸಾವನ್ನಪ್ಪಿರುವ ಘಟನೆ ಅತ್ಯಂತ ದುರದೃಷ್ಟಕರ ಮೃತ ಇಂಜಿನಯರ್‍ಗಳ ಕುಟುಂಬ ವರ್ಗಕ್ಕೆ ಇಲಾಖೆಯಿಂದ ಪರಿಹಾರ ನೀಡುವ ಸಂಬಂಧ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.

ಹೆಬ್ಬಾಳದಲ್ಲಿ ನಿರ್ಮಾಣವಾಗುತ್ತಿರುವ ಎಸ್‍ಟಿಪಿ ಎರಡನೇ ಅತಿ ದೊಡ್ಡ ಎಸ್‍ಟಿಪಿ ಆಗಿದೆ. ಶೀಘ್ರವೇ ಕಾಮಗಾರಿ ಪೂರ್ಣಗೊಳಿಸಲು ಎಲ್ಲಾ ರೀತಿಯ ನಿರ್ದೇಶನ ನೀಡಲಾಗಿತ್ತು. ಈ ಅವಧಿಯಲ್ಲಿ ಇಂಥ ಘಟನೆ  ನಡೆದಿದ್ದು ಬೇಸರ ತರಿಸಿದೆ.ಇದರ ಜೊತೆಗೆ ಇಲಾಖೆಯಿಂದಲೂ ಸಹ ತನಿಖೆಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ದುರಂತ ನಡೆದ ನ ಯಾರೆಲ್ಲಾ ಅಧಿಕಾರಿಗಳು ಸ್ಥಳದಲ್ಲಿ ಇದ್ದರೂ, ಯಾಕೆ ಮುಂಜಾಗೃತಿ ತೆಗೆದುಕೊಂಡಿಲ್ಲಈ ಬೇಜವಾಬ್ದಾರಿಗೆ ಯಾರು ಹೊಣೆ ಈ ಎಲ್ಲಾ ಅಂಶಗಳನ್ನು ಸಹ ಇಲಾಖೆ ಒಳಗೆ ತನಿಖೆ ಮಾಡಲಾಗುವುದು. ಇಂಥ ಘಟನೆ ಎಂದೂ ಮರುಕಳಿಸದಂತೆ ನೋಡಿಕೊಳ್ಳಲಾಗುವುದು ಎಂದರು.

ಬೆಳಂದೂರು ಬಳಿ ಇರುವ ಎಸ್‍ಟಿಪಿಯಿಂದ ನೀರು ಶುದ್ದೀಕರಿಸಲಾಗಿತ್ತಿದೆ. ಅದೇ ಮಾದರಿಯಲ್ಲಿ ಹೆಬ್ಬಾಳದಲ್ಲಿಯೂ ಮಾಡಲಾಗುತ್ತಿದ್ದು, ಇದಕ್ಕಾಗಿ 365 ಕೋಟಿ ರು. ವೆಚ್ಚ ಮಾಡಲಾಗುತ್ತಿದೆ. ಇನ್ನು ಸಾಕಷ್ಟು ಕಾಮಗಾರಿ ಪೂರತಣಗೊಳ್ಳುವುದು ಬಾಕಿ ಇದ್ದು, ಈ ಎಲ್ಲವೂ ಅತಿ ಎಚ್ಚರಿಕೆಯಿಂದ ಮಾಡಲು ಸೂಚಿಸಿರುವುದಾಗಿ ಹೇಳಿದರು.


ಸಂಬಂಧಿತ ಟ್ಯಾಗ್ಗಳು

stp water treatment plat G Parameshwar deputy CM karnataka bengaluru


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ