ರಾಹುಲ್ ಭೇಟಿಯಾದ ಸಿದ್ದರಾಮಯ್ಯ

Siddaramaih meets Rahul Gandhi

19-06-2019

ದೆಹಲಿ: 2019ರ ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಇದೇ ಮೊದಲ ಬಾರಿ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿಯಾದರು. ಇನ್ನು ಮುಂಬರುವ ದಿನಗಳಲ್ಲಿ ಪಕ್ಷದ ಸಂಘಟನೆ, ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆ, ರಾಜ್ಯದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ, ಸಂಪುಟ ವಿಸ್ತರಣೆ, ನಿಗಮ-ಮಂಡಳಿ ನೇಮಕ, ಪಕ್ಷದ ಆಂತರಿಕ ಶಿಸ್ತು ಇತ್ಯಾದಿ ವಿಷಯಗಳ ಕುರಿತು ಉಭಯ ನಾಯಕರು ಚರ್ಚಿಸುವ ಸಾಧ್ಯತೆ ಇದೆ. ಇದೇ ವೇಳೆ ಪಕ್ಷದ ಅಧ್ಯಕ್ಷರಿಗೆ ಶುಭ ಕೋರಿರುವ ಕಾರ್ಯಕರ್ತರು, ರಾಹುಲ್ ಹೆಸರಿನಲ್ಲಿ ಅವರ ಮನೆಯ ಮುಂದೆ ಹೋಮ, ಹವನಗಳನ್ನು ನೆರವೇರಿಸಿದರು.


ಸಂಬಂಧಿತ ಟ್ಯಾಗ್ಗಳು

siddaramaiah Birth day Rahul gandhi Delhi


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ