ಆಟೋ ಡಿಕ್ಕಿ: ಮಗಳನ್ನು ನೋಡಲು ಬಂದ ತಂದೆ ಸಾವು

accident: 70 year old man dies in bengaluru

19-06-2019

ಬೆಂಗಳೂರು: ಯಲಹಂಕದ ನಂಜಪ್ಪ ವೃತ್ತದಲ್ಲಿ ನಿನ್ನೆ ರಾತ್ರಿ  ಮಗಳ ಮನೆಗೆ ಹೋಗಲು ರಸ್ತೆ ದಾಟುತ್ತಿದ್ದ ತಂದೆಯೊಬ್ಬರು ಆಟೋ ಡಿಕ್ಕಿ ಹೊಡೆದು ಮೃತಪಟ್ಟಿರುವ ದುರ್ಘಟನೆ ನಡೆದಿದೆ.

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ನಾರಾಯಣಪ್ಪ (70)ಎಂದು ಮೃತಪಟ್ಟವರನ್ನು ಗುರುತಿಸಲಾಗಿದೆ. ದೊಡ್ಡಬೊಮ್ಮಸಂದ್ರದಲ್ಲಿದ್ದ ಮಗಳನ್ನು ನೋಡಲು ಬ್ಯಾಡಗಿಯಿಂದ ಬಂದಿದ್ದ ನಾರಾಯಣಪ್ಪ ರಾತ್ರಿ 10.30ರ ವೇಳೆ ನಂಜಪ್ಪ ವೃತ್ತದಲ್ಲಿ ಬಸ್ ಇಳಿದು ರಸ್ತೆ ದಾಟುತ್ತಿದ್ದರು.

ಈ ವೇಳೆ ವೇಗವಾಗಿ ಬಂದ ಆಟೋ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮಧ್ಯರಾತ್ರಿ 2ರ ವೇಳೆಗೆ ಮೃತಪಟ್ಟಿದ್ದಾರೆ.

ಪ್ರಕರಣ ದಾಖಲಿಸಿರುವ ಯಲಹಂಕ ಸಂಚಾರ ಪೋಲೀಸರು, ಆಟೋ ಚಾಲಕನನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ಡಿಸಿಪಿ ಸಾರಾ ಪಾತಿಮಾ ತಿಳಿಸಿದ್ದಾರೆ.
 


ಸಂಬಂಧಿತ ಟ್ಯಾಗ್ಗಳು

bengaluru accident father auto


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ