ರಾಹುಲ್ ಗೆ ಜನ್ಮ ದಿನದ ಸಂಭ್ರಮ

Rahul Gandhi’s birthday

19-06-2019

ನವದೆಹಲಿ : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಇಂದು 49ನೇ ಜನ್ಮದಿನದ ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ರಾಹುಲ್‍ಗೆ ಹುಟ್ಟುಹಬ್ಬದ ಶುಭ ಕೋರಿದ್ದಾರೆ.
ಯುಪಿಎ ಅಧ್ಯಕ್ಷೆ ಮತ್ತು ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕಿ ಸೋನಿಯಾಗಾಂಧಿ, ಸಹೋದರಿ-ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್, ಕಾಂಗ್ರೆಸ್ ನಾಯಕರಾದ ಗುಲಾಂ ನಬಿ ಅಜಾದ್, ಎ.ಕೆ.ಆಂಟನಿ, ಎಂ. ಮಲ್ಲಿಕಾರ್ಜುನ ಖರ್ಗೆ ಶುಭಾಶಯ ತಿಳಿಸಿದರು. ರಾಹುಲ್ ಗಾಂಧಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು, ಅವರಿಗೆ ಭಗವಂತ ಉತ್ತಮ ಆರೋಗ್ಯ ಮತ್ತು ದೀರ್ಘಾಯಸ್ಸು ನೀಡಲಿ ಎಂದು ಪ್ರಧಾನಮಂತ್ರಿ ಟ್ವೀಟ್ ಮಾಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Rahul Gandhi Birthday AICC Sonia Gandhi


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ