ಸರ್ಕಾರದ ಎಲ್ಲಾ ತೀರ್ಮಾನಗಳು ವಿವಾದಕ್ಕೆ ಕಾರಣವಾಗುತ್ತಿವೆ !

Kannada News

09-06-2017

ಮೈಸೂರು:- ಸ್ಟೀಲ್ ಬ್ರಿಡ್ಜ್ ವಿವಾದದ ಬಗ್ಗೆ ಮೈಸೂರಿನಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ‌.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಸರ್ಕಾರ ಏನೇ ತೀರ್ಮಾನ ಕೈಗೊಂಡರೂ ಅದು ವಿವಾದಕ್ಕೆ ಕಾರಣವಾಗುತ್ತಿದೆ. ಇಂತಹ ಉದ್ದಟತನದ ನಿರ್ಧಾರ ಕೈಗೊಳ್ಳುವ ಸರ್ಕಾರಕ್ಕೆ ಜನರೇ ಮುಂದೆ ತಕ್ಕ ಪಾಠ ಕಲಿಸುತ್ತಾರೆ. ಸರ್ಕಾರ ಪ್ರಣಾಳಿಕೆಯಲ್ಲಿ ನೀಡಿದ್ದ ಎಲ್ಲಾ ಭರವಸೆ ಈಡೇರಿಸಿದ್ದರೆ ಇಂದು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರಲಿಲ್ಲ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಭರವಸೆಗಳು  ಈಡೇರಿವೆ ಎಂಬ ಅಂಶಗಳು ಕೇವಲ ಪುಸ್ತಕದಲ್ಲಿ ಮಾತ್ರ ಇದೆ ಎಂದರು. ರಂಜಾನ್ ನಂತರ ಮಾಜಿ ಸಂಸದ ಎಚ್. ವಿಶ್ವನಾಥ್ ಅವರನ್ನು ಜೆಡಿಎಸ್ ಗೆ ಸೇರ್ಪಡೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ರಾಷ್ಟ್ರಪತಿ ಚುನಾವಣೆ ವಿಚಾರದಲ್ಲಿ ಪ್ರತಿಪಕ್ಷಗಳು ಕೈಗೊಳ್ಳುವ ನಿರ್ಧಾರದ ನಂತರ ಜೆಡಿಎಸ್ ತೀರ್ಮಾನ ಕೈಗೊಳ್ಳಲಿದೆ ಎಂದು ತಿಳಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ