ತಡವಾಗಿ ಬಂದ ವಿದ್ಯಾರ್ಥಿಗಳಿಗೆ ಛಡಿ ಏಟು: ಶಿಕ್ಷಕನಿಗೆ ನೊಟೀಸು

students trashed by teachers for coming late to class

20-06-2019

ಶ್ರೀನಗರ: ಕಣಿವೆ ರಾಜ್ಯ ಕಾಶ್ಮೀರದ ಗುಜ್ಜರ್ ಮತ್ತು ಬಕ್ರೇವಾಲ್‍ನ ದೋಡಾ ವಸತಿ ಗೃಹದಲ್ಲಿ ವಿದ್ಯಾರ್ಥಿಗಳ ಮೇಲೆ ಶಿಕ್ಷಕ ಹಲ್ಲೆ ನಡೆಸಿದ ಪ್ರಕರಣ ನಡೆದಿದೆ. ವಸತಿ ನಿಲಯಕ್ಕೆ 10 ನಿಮಿಷ ತಡವಾಗಿ ಆಗಮಿಸಿದರು ಎಂಬ ಕಾರಣಕ್ಕೆ ವಿದ್ಯಾರ್ಥಿಗಳನ್ನು ಶಿಕ್ಷಕ ಮನಬಂದಂತೆ ಥಳಿಸಿದ್ದಾನೆ. ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆಯಾಗಿವೆ. ಈ ಕುರಿತು ಪ್ರತಿಕ್ರಿಯಿಸಿರುವ ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ, ಈಗಾಗಲೇ ಶಿಕ್ಷಕ ಘಟನೆ ಸಂಬಂಧ ಕ್ಷಮೆ ಕೋರಿದ್ದಾರೆ. ಮಕ್ಕಳ ಕಲ್ಯಾಣ ಇಲಾಖೆ ಸಮಿತಿ ಮುಂದೆ ಹಾಜರಾಗಿ ವಿವರಣೆ ನೀಡುವಂತೆ ಈಗಾಗಲೇ ಶಿಕ್ಷಕರಿಗೆ ನಿರ್ದೇಶನ ನೀಡಲಾಗಿದೆ. ಅವರು ಹಾಜರಾಗದೇ ಇದಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

students trashed teachers human rights crime


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ