ರಾಜೀನಾಮೆ ವಾಪಸ್ ಪ್ರಶ್ನೆಯೇ ಇಲ್ಲ: ವಿಶ್ವನಾಥ್

H Vishwanath Statement

20-06-2019

ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೀಡಿದ ರಾಜೀನಾಮೆಯನ್ನು ಅಂಗೀಕರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು ಚಿಂತನೆ ನಡೆಸುವುದಾಗಿ ಜೆಡಿಎಸ್‌ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್‌ ಹೇಳಿದ್ದಾರೆ. ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಈಗಾಗಲೇ ರಾಜೀನಾಮೆ ನೀಡಿದ್ದೇನೆ. ಹೀಗಾಗಿ ಅದನ್ನು ವಾಪಸ್‌ ಪಡೆಯುವ ಪ್ರಶ್ನೆಯೇ ಇಲ್ಲ ಎಂದರು.

ಮಧ್ಯಂತರ ಚುನಾವಣೆಯ ಆತಂಕವಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೇ ಪಕ್ಷದ ಅಧ್ಯಕ್ಷ ಸ್ಥಾನ ವಹಿಸುವುದು ಒಳ್ಳೆಯದು. ಈ ಹಿಂದೆ ದೇವರಾಜ ಅರಸು,ಎಸ್.ಎಂ.ಕೃಷ್ಣ ಅವರಂತಹ ನಾಯಕರು ಹೀಗೆ ಎರಡೆರಡು ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ ಎಂದು ನುಡಿದರು.

ಇತ್ತೀಚೆಗೆ ದೇವೇಗೌಡರು ನನ್ನನ್ನು ಕರೆಸಿಕೊಂಡು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ಹಿಂಪಡೆಯುವಂತೆ ಹೇಳಿದ್ದರು. ಪರಿಶೀಲಿಸುವುದಾಗಿ ಹೇಳಿ ಬಂದಿದ್ದೆ. ಆದರೆ ಈಗ ಮತ್ತೆ ಹೇಳುತ್ತಿದ್ದೇನೆ. ಇದನ್ನು ದೇವೇಗೌಡರನ್ನು ಭೇಟಿ ಮಾಡಿ ಹೇಳಬೇಕಿತ್ತು. ಆದರೆ ನನಗೆ ಅವರನ್ನು ಎದುರಿಸುವ ಚೈತನ್ಯ ಇಲ್ಲ. ಯಾಕೆಂದರೆ ಅವರು ದೊಡ್ಡವರು. ಹೀಗಾಗಿ ಇಲ್ಲಿಂದಲೇ ಅವರಿಗೆ ಮನವಿ ಮಾಡಿಕೊಳ್ಳುತ್ತೇನೆ. ನನ್ನ ರಾಜೀನಾಮೆಯನ್ನು ಅವರು ಅಂಗೀಕರಿಸಲಿ ಎಂದು ಹೇಳಿದರು.


ಸಂಬಂಧಿತ ಟ್ಯಾಗ್ಗಳು

H Vishwanath Resign MLA HD Kumaraswamy


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ