ವಿಧಾನಸೌಧ ಆವರಣದಲ್ಲಿ ರಾತ್ರಿ ವಾಹನ ನಿಲುಗಡೆಗೆ ನಿರ್ಬಂಧ!

No parking

21-06-2019

ಬೆಂಗಳೂರು: ವಿಧಾನಸೌಧ ಮತ್ತು ವಿಕಾಸಸೌಧದ ಆವರಣದಲ್ಲಿ ರಾತ್ರಿ ವೇಳೆ ಸಾರ್ವಜನಿಕ ವಾಹನ ನಿಲುಗಡೆ ನಿರ್ಬಂಧಿಸಲಾಗಿದೆ. ವಿಕಾಸಸೌಧ ಮತ್ತು ವಿಧಾನಸೌಧದ ವಾಹನಗಳ ನಿಲುಗಡೆ ಸ್ಥಳದಲ್ಲಿ ರಾತ್ರಿ ವೇಳೆ ಯಾವುದೇ ವಾಹನವನ್ನು ನಿಲ್ಲಿಸುವಂತಿಲ್ಲ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ  ಸುತ್ತೋಲೆ ಹೊರಡಿಸಿದೆ.

ವಿಕಾಸಸೌಧದಲ್ಲಿ ವಾಹನ ನಿಲುಗಡೆಗೆ ಅವಕಾಶ ಇದ್ದು, ಇಲ್ಲಿ ಕೆಲ ಖಾಸಗಿ ವಾಹನಗಳು ಹಾಗೂ ಕೆಲ ಸರ್ಕಾರಿ ವಾಹನಗಳು ಬೇಕಾಬಿಟ್ಟಿಯಾಗಿ ನಿಂತಿವೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಡಿಪಿಆರ್ ಉಪಕಾರ್ಯದರ್ಶಿ ನಾಗರಾಜ್ ಸ್ಥಳ ಪರಿಶೀಲಿಸಿ ಬಹಳ ದಿನಗಳಿಂದ ನಿಂತಿರುವ ಸರ್ಕಾರಿ ಮತ್ತು ಖಾಸಗಿ ವಾಹನಗಳನ್ನು ಸ್ಥಳದಿಂದ ಎತ್ತಂಗಡಿ ಮಾಡುವಂತೆ ಸೂಚಿಸಿದ್ದಾರೆ. ಹಾಗೆಯೇ ರಾತ್ರಿ ವೇಳೆ ವಾಹನಗಳ ನಿಲುಗಡೆಗೆ ನಿರ್ಬಂದ ಹೇರಿ ಸುತ್ತೋಲೆ ಹೊರಡಿಸಿದ್ದಾರೆ.

ಕೆಲ ಖಾಸಗಿಯವರು ಕೆಲ ಸಿಬ್ಬಂದಿಗಳ ಜತೆ ಸೇರಿಕೊಂಡು ರಾತ್ರಿ ವೇಳೆ ವಿಧಾನಸೌಧ ಮತ್ತು ವಿಕಾಸಸೌಧ ನಿಲ್ದಾಣಗಳನ್ನು ತಮ್ಮ ವಾಹನಗಳ ನಿಲುಗಡೆಗೆ ಬಳಸಿಕೊಳ್ಳುತ್ತಿರುವ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಸುತ್ತೋಲೆ ಹೊರಡಿಸಲಾಗಿದೆ. ಜತೆಗೆ ಬೇರೆ ಬೇರೆ ಇಲಾಖೆಗಳ ಸರ್ಕಾರಿ ವಾಹನಗಳು ವಿಧಾನಸೌಧ ಮತ್ತು ವಿಕಾಸಸೌಧದಲ್ಲಿ ರಾತ್ರಿ ವೇಳೆ ನಿಲ್ಲುವಂತಿಲ್ಲ.


ಸಂಬಂಧಿತ ಟ್ಯಾಗ್ಗಳು

Vidhana Soudha Parking Vikasa Soudha Bengaluru


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ