ಶಾರ್ಟ್ ಸರ್ಕ್ಯೂಟ್ ನಿಂದ ಅಂಗಡಿಗೆ ಬೆಂಕಿ. ಅಪಾರ ನಷ್ಟ !

Kannada News

09-06-2017

ಬೆಂಗಳೂರು:- ಕೆಪಿ ಅಗ್ರಹಾರದ ಮಾಗಡಿ ರಸ್ತೆಯಲ್ಲಿನ ಅಲಂಕಾರಿಕ ವಸ್ತುಗಳ ಅಂಗಡಿಗೆ ಗುರುವಾರ ರಾತ್ರಿ  ಬೆಂಕಿ ಬಿದ್ದು ಅಪಾರ ನಷ್ಟ ಸಂಭವಿಸಿದೆ, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಾಗಡಿ ರಸ್ತೆಯ 7 ನೇ ಕ್ರಾಸ್ ನಲ್ಲಿರುವ ಅಂಗಡಿಗೆ ರಾತ್ರಿ 8.30 ರ ಸುಮಾರಿನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಆಕಸ್ಮಿಕ ಬೆಂಕಿ ತಗುಲಿದ್ದು , ಅಂಗಡಿಯಲ್ಲಿದ್ದ ಸಿಬ್ಬಂದಿ ಬೆಂಕಿ ನಂದಿಸಲು ಯತ್ನಿಸಿದರಾದರೂ ಶಮನವಾಗದ ಬೆಂಕಿ ಇಡೀ ಅಂಗಡಿ ಆವರಿಸಿ ಆತಂಕ ಉಂಟಾಗಿದೆ.  ಬೆಂಕಿ ಹೆಚ್ಚಾಗುತ್ತಿದ್ದಂತೆ ಅಂಗಡಿಯಲ್ಲಿದ್ದ ಸಿಬ್ಬಂದಿ ಹೊರ  ಬಂದು ಅಗ್ನಿಶಾಮಕ ದಳಕ್ಕೆ ಸುದ್ದಿ ಮುಟ್ಟಿಸಿದ್ದಾರೆ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ 4 ವಾಹನಗಳು ಮಧ್ಯರಾತ್ರಿಯವರೆಗೂ ಶ್ರಮಿಸಿ ಬೆಂಕಿ ನಂದಿಸಿವೆ. ಬೆಂಕಿಯಿಂದ ಲಕ್ಷಾಂತರ ಮೌಲ್ಯದ ಆಟಿಕೆಗಳು, ಅಲಂಕಾರಿಕ ವಸ್ತುಗಳು ಬೆಂಕಿಗಾಹುತಿಯಾಗಿದ್ದು, ಕೆಪಿ ಅಗ್ರಹಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮತ್ತೋಂದೆಡೆ ಕಾಟನ್‍ಪೇಟೆಯಲ್ಲಿ ಅಂಗಡಿಯೊಂದಕ್ಕೆ ಗುರುವಾರ ರಾತ್ರಿ 11 ರ ವೇಳೆ ಆಕಸ್ಮಿಕ ಬೆಂಕಿ ತಗುಲಿ ಅಂಗಡಿಯಲ್ಲಿದ್ದ ಅಲಂಕಾರಿಕ ವಸ್ತುಗಳು ಸುಟ್ಟುಹೋಗಿವೆ. ಬೆಂಕಿ ಬಿದ್ದ ಸುದ್ದಿ ತಿಳಿದ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸಿವೆ. ಬೆಂಕಿಯಿಂದ ಸಾವಿರಾರು ಮೌಲ್ಯದ ವಸ್ತುಗಳು ಸುಟ್ಟುಹೋಗಿವೆ. ಕಾಟನ್‍ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ