ಟಾಟಾ ಸುಮೋ ಡಿಕ್ಕಿ; ಮಹಿಳೆ ಸಾವು

woman dies in an accident

25-06-2019

ಬೆಂಗಳೂರು: ಯಲಹಂಕದ ಅಟ್ಟೂರು ಲೇಔಟ್‍ನ ಸರ್ವೀಸ್ ರಸ್ತೆಯಲ್ಲಿ ಇಂದು ಬೆಳಿಗ್ಗೆ  ವೇಗವಾಗಿ ಬಂದ ಟಾಟಾ ಸುಮೋ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ನಡೆದಿದೆ.
ಅಟ್ಟೂರು ಲೇಔಟ್‍ನ ಸಾವಿತ್ರಮ್ಮ (60)ಎಂದು ಮೃತಪಟ್ಟವರನ್ನು ಗುರುತಿಸಲಾಗಿದೆ. ಬೆಳಿಗ್ಗೆ 8ರ ವೇಳೆ ಮನೆಯ ಮುಂದಿನ ಸರ್ವೀಸ್ ರಸ್ತೆಯನ್ನು ಸಾವಿತ್ರಮ್ಮ ಅವರು ದಾಟುತ್ತಿದ್ದಾಗ ವೇಗವಾಗಿ ಬಂದ ಟಾಟಾ ಸುಮೋ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪ್ರಕರಣ ದಾಖಲಿಸಿರುವ ಯಲಹಂಕ ಸಂಚಾರ ಪೊಲೀಸರು, ಟಾಟಾ ಸುಮೋ ಚಾಲಕನನ್ನು ಬಂಧಿಸಿ, ಮುಂದಿನ ತನಿಖೆ ಕೈಗೊಂಡಿದ್ದಾರೆ.
 


ಸಂಬಂಧಿತ ಟ್ಯಾಗ್ಗಳು

accident tata sumo police bengaluru


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ