ಇಂದಿನಿಂದ ಸಿಎಮ್ ಗ್ರಾಮವಾಸ್ಥವ್ಯ

2nd Grama vastayva by CM

26-06-2019

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದಿನಿಂದ ತಮ್ಮ 2ನೇ ಗ್ರಾಮವಾಸ್ತವ್ಯವನ್ನು ನಡೆಸಲಿದ್ದು, ರಾತ್ರಿ ರೈಲಿನ ಮೂಲಕ ರಾಯಚೂರಿಗೆ ಪ್ರಯಾಣ ಬೆಳೆಸಿದ್ದಾರೆ.

ಇಂದು ರಾಯಚೂರು ಜಿಲ್ಲೆಯ ಕರೆಗುಡ್ಡ ಗ್ರಾಮದಲ್ಲಿ ಹಾಗೂ ನಾಳೆ ಬೀದರ್ ಜಿಲ್ಲೆ ಬಸವಕಲ್ಯಾಣ ತಾಲ್ಲೂಕಿನ ಉಜಿಳಾಂಬ ಗ್ರಾಮದಲ್ಲಿ ಗ್ರಾಮ ವ್ಯಾಸ್ತವ್ಯವನ್ನು ಮುಖ್ಯಮಂತ್ರಿ ಮಾಡಲಿದ್ದಾರೆ.

ಇಂದು ರಾಯಚೂರಿನ ಮಾನ್ವಿ ತಾಲೂಕಿನ ಕರಿಗುಡ್ಡ ಗ್ರಾಮಕ್ಕೆ ಪ್ರಯಾಣಿಸುವ ಮುಖ್ಯಮಂತ್ರಿಗಳು ಬೆಳಗ್ಗೆಯಿಂದ ಸಂಜೆಯವರೆಗೂ ಸಾರ್ವಜನಿಕರ ಕುಂದುಕೊರತೆಗಳ ಆಲಿಕೆ, ಮನವಿಗಳ ಸ್ವೀಕಾರ ನಡೆಸುವ ಮೂಲಕ ಜನತಾದರ್ಶನ ನಡೆಸಲಿದ್ದಾರೆ. ಸಂಜೆ ರೈತರಿಗೆ ಮಾಹಿತಿ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಸ್ಥಳೀಯ ಶಾಲಾ ಮಕ್ಕಳು ನಡೆಸಿಕೊಡುವ ಸಾಂಸ್ಕøತಿಕ ಕಾರ್ಯಕ್ರಮ ವೀಕ್ಷಣೆ ಮಾಡಲಿದ್ದಾರೆ.

ನಂತರ ಶಾಲಾ ಮಕ್ಕಳು ಹಾಗೂ ಶಿಕ್ಷಕರೊಂದಿಗೆ ಭೋಜನ ಮಾಡಲಿರುವ ಮುಖ್ಯಮಂತ್ರಿ, ಕರಿಗುಡ್ಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ವಾಸ್ತವ್ಯವನ್ನು ಮಾಡಲಿದ್ದಾರೆ.

ಮರುದಿನ ಬೆಳಗ್ಗೆ ಕರೆಗುಡ್ಡದಿಂದ ಬೀದರ್ ಜಿಲ್ಲೆಯ ಬಸವ ಕಲ್ಯಾಣ ತಾಲೂಕಿನ ಉಜಿಳಾಂಬ ಗ್ರಾಮಕ್ಕೆ ತೆರಳಿ, ಅಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೆ ಜನತಾದರ್ಶನ ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಜನರ ಕುಂದುಕೊರತೆಗಳನ್ನು ಆಲಿಸಲಿದ್ದಾರೆ.

ಅಂದು(ಜೂ.27) ಸಂಜೆ ರೈತರಿಗೆ ಮಾಹಿತಿ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶಾಲಾ ಮಕ್ಕಳು ನಡೆಸಿಕೊಡುವ ಸಾಂಸ್ಕøತಿಕ ಕಾರ್ಯಕ್ರಮ ವೀಕ್ಷಿಸಲಿದ್ದಾರೆ.

ನಂತರ ಶಾಲಾ ಮಕ್ಕಳು ಮತ್ತು ಶಿಕ್ಷಕರೊಂದಿಗೆ ರಾತ್ರಿ ಭೋಜನ ಮಾಡುವ ಮುಖ್ಯಮಂತ್ರಿ ಉಜಿಳಾಂಬ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂದು ರಾತ್ರಿ ಗ್ರಾಮ ವಾಸ್ತವ್ಯ ಮಾಡಲಿದ್ದು, ಜೂ.28 ರಂದು ವಿಶೇಷ ವಿಮಾನದ ಮೂಲಕ ಬೀದರ್‍ನಿಂದ ಬೆಂಗಳೂರಿಗೆ ಮರಳುವ ಕಾರ್ಯಕ್ರಮವಿದೆ.


ಸಂಬಂಧಿತ ಟ್ಯಾಗ್ಗಳು

H D Kumaraswami Karnataka CM Grama Vastavya JDS


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ