ರಾಜೀನಾಮೆ ಹಿಂಪಡೆಯಲು ರಾಹುಲ್ ಗಾಂಧಿ ನಕಾರ

 Rahul Gandhi

26-06-2019

ದೆಹಲಿ: ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಸಂಸದೀಯ ಸಮಿತಿ ಸಭೆಯಲ್ಲಿ ಪಕ್ಷದ ಅಧ್ಯಕ್ಷ ಹುದ್ದೆಗೆ ನೀಡಿದ್ದ ರಾಜೀನಾಮೆಯನ್ನು ಹಿಂಪಡೆಯಲು ರಾಹುಲ್ ಗಾಂಧಿ ನಿರಾಕರಿಸಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ. ಈ ಮೂಲಕ ಪಕ್ಷದ ಅಧ್ಯಕ್ಷ ಹುದ್ದೆಗೆ ನೀಡಿದ್ದ ರಾಜೀನಾಮೆ ಹಿಂಪಡೆಯುವ ವಿಚಾರಕ್ಕೆ ರಾಹುಲ್ ಬದ್ಧರಾಗಿದ್ದಾರೆ.

ಆದರೆ, ಪಕ್ಷದ ಅಧ್ಯಕ್ಷ ಹುದ್ದೆಗೆ ನೀಡಿರುವ ರಾಜೀನಾಮೆಯನ್ನು ಹಿಂಪಡೆಯಬೇಕು ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರು ರಾಹುಲ್ ಗಾಂಧಿಯವರ ಮನೆಯ ಮುಂದೆ ಒತ್ತಾಯಿಸಿದರು. ಜೊತೆಗೆ, ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆದು ಪಕ್ಷಕ್ಕೆ ಬಲ ತುಂಬಿ ಎಂದು ಅವರು ಮನವಿ ಮಾಡಿದರು.


ಸಂಬಂಧಿತ ಟ್ಯಾಗ್ಗಳು

Rahul Gandhi Congress AICC UPA


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ