ನಗರಪಾಲಿಕೆ ಅಧಿಕಾರಿಗೆ ಬ್ಯಾಟ್‍ನಿಂದ ಥಳಿಸಿದ ಬಿಜೆಪಿ ಶಾಸಕ

BJP MLA

26-06-2019

ಭೋಪಾಲ್: ಬಿಜೆಪಿ ಶಾಸಕ ಮತ್ತು ಬಿಜೆಪಿಯ ಹಿರಿಯ ನಾಯಕ ಕೈಲಾಶ್ ವಿಜಯವರ್ಗೀಯ ಪುತ್ರ ಆಕಾಶ್ ವಿಜಯವರ್ಗೀಯ ನಗರಪಾಲಿಕೆ ಅಧಿಕಾರಿಯನ್ನು ಬ್ಯಾಟ್‍ನಿಂದ ಥಳಿಸಿದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇಂದೋರ್ನಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಗೆ ನಗರಪಾಲಿಕೆ ಅಧಿಕಾರಿಗಳು ಆಗಮಿಸಿದ್ದರು. ಈ ವೇಳೆ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆಕಾಶ್, ಅಧಿಕಾರಿಗಳಿಗೆ ಥಳಿಸಿದ್ದಾರೆ. ಈ ಕೃತ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಈ ವೇಳೆ ಆಕಾಶ್ ಬೆಂಬಲಿಗರು ಕೂಡ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

BJP Bhupal Kailash Vijayvargiya Akash Vijayvargiya


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ