ಸಿಪಿಐಎಂ ಕಾರ್ಯಕರ್ತರ ಮೇಲೆ ಆರ್‍ಎಸ್‍ಎಸ್ ಕಾರ್ಯಕರ್ತರ ದಾಳಿ ?

Kannada News

09-06-2017 171

ಬೆಂಗಳೂರು:- ದೆಹಲಿಯ ಸಿಪಿಐಎಂ ಕಚೇರಿಯಲ್ಲಿ  ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯಚೂರಿ ಅವರು ಪತ್ರಿಕಾಗೋಷ್ಠಿ ನಡೆಸುತ್ತಿದ್ದ ವೇಳೆ ನುಗ್ಗಿ ದಾಳಿ ನಡೆಸಿರುವವರನ್ನು ಬಂಧಿಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸಿಪಿಐಎಂ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಮೈಸೂರ್ ಬ್ಯಾಂಕ್ ವೃತ್ತದಲ್ಲಿ ಇಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಪಕ್ಷದ ಕಾರ್ಯಕರ್ತರು ದೆಹಲಿಯ ಸಿಪಿಐಎಂ ಕೇಂದ್ರ ಕಚೇರಿಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯಚೂರಿ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದಾಗ ಆರ್‍ಎಸ್‍ಎಸ್ ಗೂಂಡಾಗಳು ದಾಳಿ ನಡೆಸಿ ಪುಂಡಾಟ ನಡೆಸಿರುವುದನ್ನು ಖಂಡಿಸಿದರು. ಸಿಪಿಐಎಂ ಕಾರ್ಯಕರ್ತರ ಮೇಲೆ ಆರ್‍ಎಸ್‍ಎಸ್ ಕಾರ್ಯಕರ್ತರು ದಾಳಿ ನಡೆಸಿ ದೌರ್ಜನ್ಯ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ಇಂತಹ ಕೃತ್ಯಗಳಿಗೆ ಕುಮ್ಮಕ್ಕು ನೀಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಆರ್‍ಎಸ್‍ಎಸ್ ಕಾರ್ಯಕರ್ತರ ಗೂಂಡಾ ಪ್ರವೃತ್ತಿಯನ್ನು ಖಂಡಿಸಿ ದೇಶಾದ್ಯಂತ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು. ಪಕ್ಷದ ಕಾರ್ಯದರ್ಶಿ ಶ್ರೀನಿವಾಸ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ