ರಾಜಾಕಾಲುವೆ ಸುಸ್ಥಿತಿಗೆ ಮೆಗಾ ಯೋಜನೆ : ಯು.ಟಿ ಖಾದರ್

U T Khadar Statement

27-06-2019

ಬೆಂಗಳೂರು: ರಾಜ್ಯದ ಎಲ್ಲಾ ಮಹಾನಗರ ಪಾಲಿಕೆ ವ್ಯಾಪ್ತಿಯ ರಾಜಕಾಲುವೆಗಳನ್ನು ಸುಸ್ಥಿತಿಗೆ ತರಲು ಮೆಗಾ ಯೋಜನೆ ರೂಪಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ತಿಳಿಸಿದರು.
ವಿಕಾಸಸೌಧದಲ್ಲಿ ಮಾತನಾಡಿದ ಅವರು, ನಗರ ವ್ಯಾಪ್ತಿಯಲ್ಲಿ ಮಳೆ ನೀರುಗಾಲುವೆ ಹಾಗೂ ರಾಜಕಾಲುವೆ ಒತ್ತುವರಿಯಾಗಿರುವುದರಿಂದ ಮಳೆ ನೀರು ಸರಾಗವಾಗಿ ಹರಿಯುತ್ತಿಲ್ಲ. ಮಳೆಗಾಲ ನೀರು ಸಂಗ್ರಹವಾಗಿ ಕೆಲವೆಡೆ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ದೊಡ್ಡ ಸಮಸ್ಯೆಯಾಗಿದ್ದು ಇದಕ್ಕೆ ಪರಿಹಾರ ರೂಪಿಸಲು ಬೃಹತ್ ಯೋಜನೆ ರೂಪಿಸಲಾಗಿದೆ ಎಂದರು.

ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮಕ್ಕೆ ರಾಜಕಾಲುವೆ ಸ್ಥಿತಿಗತಿಯ ಬಗ್ಗೆ ಸಮೀಕ್ಷೆ ನಡೆಸಿ ವಿಸ್ತೃತ ವರದಿ ನೀಡುವಂತೆ ಸೂಚಿಸಲಾಗಿದೆ. ಕೆಯುಐಡಿಎಫ್ ಸಿ ಸರ್ಕಾರಕ್ಕೆ ಮೂರು ತಿಂಗಳಲ್ಲಿ ವರದಿ ನೀಡುವಂತೆ ಗಡುವು ನಿಗದಿ ಮಾಡಲಾಗಿದೆ.  ಸರ್ವೆ ನಡೆಸಿದ ಬಳಿಕ ರಾಜಕಾಲುವೆ ಒತ್ತುವರಿ ತೆರವುಗೊಳಿಸುವುದು, ಹೂಳೆತ್ತುವುದು, ಕಸ ತೆಗೆಯುವುದು ಸೇರಿದಂತೆ , ಸಿಸಿ ಕಾಲುವೆ ನಿರ್ಮಾಣ, ಅಗತ್ಯವಿರುವ ಕಡೆಗಳಲ್ಲಿ ರಾಜಕಾಲುವೆ ಮರು ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು. ರಾಜಕಾಲುವೆ ಒತ್ತುವರಿ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಈ ಬಗ್ಗೆಯೂ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದರು.


ಸಂಬಂಧಿತ ಟ್ಯಾಗ್ಗಳು

BBMP Plan U T Khadar Bengaluru


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ