ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ 6 ತಿಂಗಳು ವಿಸ್ತರಿಸಿದ ಕೇಂದ್ರ ಸರ್ಕಾರ

Center expands President rule for 6 months

28-06-2019

ದೆಹಲಿ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಮತ್ತೆ 6 ತಿಂಗಳು ರಾಷ್ಟ್ರಪತಿ ಆಡಳಿತವನ್ನು ವಿಸ್ತರಿಸಲಾಗಿದೆ. ಈ ಸಂಬಂಧ ಲೋಕಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಇನ್ನೂ ಆರು ತಿಂಗಳು ಜಮ್ಮು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತವನ್ನು ವಿಸ್ತರಿಸಲು ನಾನು ಉದ್ದೇಶಿಸಿದ್ದೇನೆ ಎಂದರು.

ಜಮ್ಮು ಕಾಶ್ಮೀರದಲ್ಲಿ ರಂಜಾನ್ ಮತ್ತು ಅಮರನಾಥ ಯಾತ್ರೆ ಪ್ರಯುಕ್ತ ಕೈಗೊಳ್ಳಬೇಕಾದ ಸಿದ್ಧತೆಗಳ ಹಿನ್ನೆಲೆಯಲ್ಲಿ ವಿಧಾನಸಭೆ ಚುನಾವಣೆನ್ನು ಮುಂದೂಡಲಾಗಿತ್ತು. ಈಗ ಚುನಾವಣೆಗೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಇದೇ ವರ್ಷದ ಅಂತ್ಯದಲ್ಲಿ ಚುನಾವಣೆ ನಡೆಸಲಾಗುವುದು ಎಂದು ಅವರು ಹೇಳಿದರು.

ಜಮ್ಮು ಕಾಶ್ಮೀರದ ಪರಿಸ್ಥಿತಿಯ ಮೇಲೆ ನಾವು ನಿಗಾ ಇಟ್ಟಿದ್ದೇವೆ. ಗಡಿ ಪ್ರದೇಶಗಳಲ್ಲಿ ಬಂಕರ್‍ಗಳ ನಿರ್ಮಾಣವನ್ನು, ಹಿಂದಿನ ಗೃಹಸಚಿವ ರಾಜನಾಥ್ ಸಿಂಗ್ ಅವರು ನಿಗದಿಗೊಳಿಸಿದ ಕಾಲಾವಧಿಯಲ್ಲೇ ಪೂರ್ಣಗೊಳಿಸಲಾಗುವುದು. ಪ್ರತಿಯೊಬ್ಬರ ಜೀವವೂ ನಮಗೆ ಮುಖ್ಯ ಎಂದರು.

ಇಂದು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತವನ್ನು 6 ತಿಂಗಳು ವಿಸ್ತರಿಸಲು ಲೋಕಸಭೆಯಲ್ಲಿ ವಿಷಯ ಮಂಡಿಸಲು ಸರ್ಕಾರ ಮೊದಲೇ ನಿರ್ಧರಿಸಿತ್ತು. ಈ ಸಂಬಂಧ ಬಿಜೆಪಿ ಸಂಸದರಿಗೆ ವಿಪ್ ಅನ್ನು ಕೂಡ ಪಕ್ಷ ನೀಡಿತ್ತು. ಕೇಂದ್ರದ ಈ ನಿರ್ಧಾರದಲ್ಲಿ ಸೋಲು ಎದುರಾಗದಂತೆ ಬಿಜೆಪಿ ಮುನ್ನೆಚ್ಚರಿಕೆಯನ್ನೂ ತೆಗೆದುಕೊಂಡಿತ್ತು.


ಸಂಬಂಧಿತ ಟ್ಯಾಗ್ಗಳು

Jammu and Kashmir Amit Shah President Rule BJP


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ