ಕಾಂಗ್ರೆಸ್ ನಲ್ಲಿ ರಾಜೀನಾಮೆ ಪರ್ವ

140 office-bearers in Congress quit after Rahul Gandhi remark

29-06-2019

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತಾಗಿ ರಾಹುಲ್ ಗಾಂಧಿ ಪ್ರಕಟಿಸಿದ ಬಳಿಕ ಸುಮಾರು 140 ಕ್ಕೂ ಹೆಚ್ಚು ಕಾಂಗ್ರೆಸ್ ಪದಾಧಿಕಾರಿಗಳು ರಾಜೀನಾಮೆ ನೀಡಿದ್ದಾರೆ. ಪ್ರಧಾನ ಕಾರ್ಯದರ್ಶಿ, 6 ಮಂದಿ ರಾಷ್ಟ್ರೀಯ ಕಾರ್ಯದರ್ಶಿ, ಇಬ್ಬರು ರಾಜ್ಯ ಕಾರ್ಯನಿರತ ಅಧ್ಯಕ್ಷರು, ನೂರಕ್ಕೂ ಹೆಚ್ಚು ರಾಜ್ಯ ಹಾಗೂ ರಾಷ್ಟ್ರೀಯ ಪದಾಧಿಕಾರಿಗಳು ರಾಜೀನಾಮೆ ನೀಡಿದ್ದಾರೆ.

ಈ ಮಧ್ಯೆ ರಾಹುಲ್ ಗಾಂಧಿ ರಾಜೀನಾಮೆಯನ್ನು ವಾಪಸ್ ಪಡೆಯಬೇಕೆಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಅವರ ಮನೆ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆ ರಾಹುಲ್ ಗಾಂಧಿ ಕಾಂಗ್ರೆಸ್ ನ ಕೆಲ ಹಿರಿಯ ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ.

ಲೋಕಸಭೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲಿನ ನಂತರ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದ್ದರು. ಆದರೆ ಕಾಂಗ್ರೆಸ್ ನ ಹಿರಿಯ ನಾಯಕರೂ ಸೇರಿದಂತೆ ಹಲವರು ರಾಜೀನಾಮೆ ವಾಪಸ್ ಪಡೆಯಬೇಕೆಂದು ಮನವಿ ಮಾಡಿದ್ದರು.


ಸಂಬಂಧಿತ ಟ್ಯಾಗ್ಗಳು

Rahul Gandhi Congress Resignation AICC


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ