ಸರ್ಕಾರಿ ಬಂಗಲೆ ತೆರವುಗೊಳಿಸಿದ ಸುಷ್ಮಾ ಸ್ವರಾಜ್

Sushma Swaraj vacates govt house

29-06-2019

ಅಭೂತಪೂರ್ವ ಗೆಲುವಿನೊಂದಿಗೆ ಬಿಜೆಪಿ ನೇತೃತ್ವದ ಎನ್ ಡಿ ಎ ಸರ್ಕಾರ ಅಧಿಕಾರಕ್ಕೆ ಬಂದ ಒಂದು ತಿಂಗಳಿಗೆಲ್ಲ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ತಮ್ಮ ಸರ್ಕಾರಿ ಬಂಗಲೆಯನ್ನು ತೆರವುಗೊಳಿಸಿದ್ದಾರೆ. ಈ ವಿಷಯವನ್ನು ಅವರು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದು, ತಾವು ಸರ್ಕಾರಿ ಬಂಗಲೆ ತೆರವು ಮಾಡುತ್ತಿದ್ದು, ಇನ್ನು ಮುಂದೆ ಸರ್ಕಾರಿ ಬಂಗಲೆಯ ಅಧಿಕೃತ ವಿಳಾಸಕ್ಕೆ ಹಾಗೂ ಸಂಪರ್ಕಕ್ಕೆ ಸಿಗುವುದಿಲ್ಲ ಎಂದಿದ್ದಾರೆ.

ಸುಷ್ಮಾ ಸ್ವರಾಜ್ ಅವರ ಈ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಪ್ರಶಂಸೆ ವ್ಯಕ್ತವಾಗಿದೆ. ಹಾಗೆಯೇ ರಾಜಕಾರಣದಲ್ಲಿ ಪ್ರಭಾವಿ ಮಹಿಳೆಯಾಗಿದ್ದ ಸುಷ್ಮಾರನ್ನು ಮಿಸ್ ಮಾಡಿಕೊಳ್ಳುವುದಾಗಿ ಅನೇಕರು ತಿಳಿಸಿದ್ದಾರೆ.

ಇದೇವೇಳೆ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಸರ್ಕಾರಿ ಬಂಗಲೆ ತೆರವುಗೊಳಿಸಲು 2 ವರ್ಷಗಳ ಕಾಲಾವಕಾಶ ಕೇಳಿದ್ದನ್ನು ನಾವು ಸ್ಮರಿಸಬಹುದು.


ಸಂಬಂಧಿತ ಟ್ಯಾಗ್ಗಳು

Sushma Swaraj Twitter Minister Akhilesh Yadav


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ