ಭಾರೀ ಮಳೆಯಿಂದ ಕಂಗೆಟ್ಟ ಮುಂಬೈ - 16 ಸಾವು

Heavy rains in Mumbai

02-07-2019

ಭಾರೀ ಮಳೆಗೆ ವಾಣಿಜ್ಯ ನಗರಿ ಮುಂಬೈ ತತ್ತರಿಸಿದೆ. ವರುಣನ ಆರ್ಭಟಕ್ಕೆ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಮನೆ, ಮಠ ಕಳೆದುಕೊಂಡು ಜನರು ಕಂಗೆಟ್ಟು ಹೋಗಿದ್ದಾರೆ. ಎಲ್ಲಿ ನೋಡಿದರೂ ಬರೀ ನೀರು. ರಸ್ತೆ ಮೇಲೆ ನೀರು ನಿಂತಿದ್ದು ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಮನೆಗಳು, ಅಂಗಡಿ ಮುಂಗಟ್ಟುಗಳು ನೀರಿನಲ್ಲಿ ಮುಳುಗಿವೆ. ವ್ಯಾಪಾರ ವಹಿವಾಟು ಸಂಪೂರ್ಣ ಸ್ಥಗತಗೊಂಡಿದೆ. ಇನ್ನು ಮಳೆ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ಸರ್ಕಾರಿ ರಜೆ ಘೋಷಿಸಲಾಗಿದೆ.

ಸಾರ್ವಜನಿಕ ಸಂಚಾರದಲ್ಲೂ ಏರುಪೇರಾಗಿದ್ದು, ಕೆಲ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ. ಮಳೆಯಿಂದಾಗಿ ಥಾನೆ ಯಲ್ಲಿ ಐವರು ಸಾವನ್ನಪ್ಪಿದ್ದಾರೆ. ಈವರೆಗೂ ಒಟ್ಟಾರೆ 16 ಮಂದಿ ಸಾವನ್ನಪ್ಪಿದ್ದಾರೆ. ಉರ್ದು ಶಾಲೆಯ ಗೋಡೆಯೊಂದು ಕುಸಿದು ಸಣ್ಣ ಮಗು ಸೇರಿದಂತೆ ಮೂವರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಇಲ್ಲಿನ ಭಾಸ್ಕರ್ ಕಾಲೋನಿಯಲ್ಲಿ ಸುಮಾರು 50 ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ.


ಸಂಬಂಧಿತ ಟ್ಯಾಗ್ಗಳು

Heavy rain Maharastra Mumbai Rescue


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ