ಪತಿಯ ಕುಡಿತಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ

Suicide Case

02-07-2019

ಬೆಂಗಳೂರು: ಪತಿಯು ಕುಡಿದು ಬಂದು ಜಗಳ ಮಾಡಿ ಕಿರುಕುಳ ನೀಡುತ್ತಿದ್ದರಿಂದ ಬೇಸತ್ತು ಪತ್ನಿ ಸೀಮೆಎಣ್ಣೆ ಸುರಿದು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮಲ್ಲಸಂದ್ರದಲ್ಲಿ ಸೋಮವಾರ ರಾತ್ರಿ ನಡೆದಿದೆ. ಮೃತರನ್ನು ಮಲ್ಲಸಂದ್ರದ 5ನೇ ಕ್ರಾಸ್‍ನ ಗೀತಾ (35)ಎಂದು ಗುರುತಿಸಲಾಗಿದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥ(ಕೆಎಸ್‍ಆರ್‍ಟಿಸಿ)ಬಸ್ ಕಂಡಕ್ಟರ್ ಆಗಿದ್ದ ಭೀಮಪ್ಪ ಎಂಬುವರನ್ನು 14 ವರ್ಷಗಳ ಹಿಂದೆ ವಿವಾಹವಾಗಿದ್ದರು.

ಗೀತಾ ದಂಪತಿಗೆ ಆಕಾಶ್ (12) ಹಾಗೂ ಕೈಲಾಶ್ (6) ಎಂಬ ಇಬ್ಬರು ಮಕ್ಕಳಿದ್ದರು. ಕಳೆದ ಮೂರ್ನಾಲ್ಕು ವರ್ಷದಿಂದ ಕುಡಿತದ ಚಟ ಅಂಟಿಸಿಕೊಂಡಿದ್ದ ಭೀಮಪ್ಪ ಕೆಲಸ ಮುಗಿಸಿಕೊಂಡು ಬಂದ ಕೂಡಲೇ ಕಂಠಪೂರ್ತಿ ಕುಡಿದು ಮನೆಗೆ ಬಂದು ಜಗಳ ಮಾಡಿ ಗೀತಾಗೆ ಕಿರುಕುಳ ನೀಡುತ್ತಿದ್ದ. ಹಲವು ಬಾರಿ ಬುದ್ಧಿ ಹೇಳಿದರೂ ಭೀಮಪ್ಪನ ವರ್ತನೆ ಸರಿ ಹೋಗಿರಲಿಲ್ಲ.

ಇದರಿಂದ ಕಂಗೆಟ್ಟ ಗೀತಾ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ ಬಾಗಲಗುಂಟೆ ಪೊಲೀಸರು ಭೀಮಪ್ಪನ ಬಂಧನಕ್ಕೆ ಶೋಧ ನಡೆಸಿದ್ದಾರೆ ಎಂದು ಡಿಸಿಪಿ ಶಶಿಕುಮಾರ್ ತಿಳಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Husband Marriage Suicide House wife


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ