ಪ್ರೇಮ ವೈಫಲ್ಯ: ವಿದ್ಯಾರ್ಥಿನಿ ನೇಣಿಗೆ ಶರಣು

Student Suicide

02-07-2019

ಪ್ರೇಮ ವೈಫಲ್ಯದಿಂದ ನೊಂದ ಪದವಿ ವಿದ್ಯಾರ್ಥಿನಿಯೊಬ್ಬರು ನೇಣಿಗೆ ಶರಣಾಗಿರುವ ದಾರುಣ ಘಟನೆ ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮಲ್ಲೇಶ್ ಪಾಳ್ಯದಲ್ಲಿ ನಡೆದಿದೆ. ಮಲ್ಲೇಶ್ ಪಾಳ್ಯದ ಗ್ಲೋಬಲ್ ಇಂಟರ್ ನ್ಯಾಷನಲ್ ಬಳಿಯ ಶಿಲ್ಪಾ (22) ಎಂದು ಆತ್ಮಹತ್ಯೆ ಮಾಡಿಕೊಂಡವರನ್ನು ಗುರುತಿಸಲಾಗಿದೆ. ಬಿಕಾಂ ಪದವಿ ವ್ಯಾಸಂಗ ಮಾಡುತ್ತಿದ್ದ  ಶಿಲ್ಪಾ, ಪ್ರೇಮ ವೈಫಲ್ಯದಿಂದ ನೊಂದು ಖಿನ್ನತೆಗೊಳಗಾಗಿದ್ದರು.

ಮನೆಯಲ್ಲಿ ಸೋಮವಾರ ರಾತ್ರಿ 10ರ ವೇಳೆ ಎಲ್ಲರೂ ಮಲಗಿದ್ದಾಗ ನೇಣು ಬಿಗಿದು ಶಿಲ್ಪಾ ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಬೈಯಪ್ಪನಹಳ್ಳಿ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Student Love failure Suicide Crime


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ