ಅಪರಿಚಿತ ವಾಹನ ಡಿಕ್ಕಿ : ಖಾಸಗಿ ಕಂಪನಿ ಉದ್ಯೋಗಿ ಸಾವು

Accident

02-07-2019

ವೇಗವಾಗಿ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್‍ನಲ್ಲಿ ಹೋಗುತ್ತಿದ್ದ ಖಾಸಗಿ ಕಂಪನಿಯ ಉದ್ಯೋಗಿಯೊಬ್ಬರು ಮೃತಪಟ್ಟ ದುರ್ಘಟನೆ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಕೋನಪ್ಪನ ಅಗ್ರಹಾರದ ಬಳಿ ಮಂಗಳವಾರ ಮುಂಜಾನೆ ನಡೆದಿದೆ. ಮೃತಪಟ್ಟವರನ್ನು ಬಿಹಾರ ಮೂಲದ ದೊಡ್ಡ ತೊಗೂರಿನ  ಪ್ರೇಮ್ ಕುಮಾರ್ (25) ಎಂದು ಗುರುತಿಸಲಾಗಿದೆ.

ದೊಡ್ಡ ತೊಗೂರಿನ ಮನೆಯಿಂದ ಕೆಲಸಕ್ಕೆ  ಬೈಕ್‍ನಲ್ಲಿ ಹೋಗುತ್ತಿದ್ದಾಗ ಮಾರ್ಗಮಧ್ಯೆ ಕೋನಪ್ಪನ ಅಗ್ರಹಾರ ಸಿಗ್ನಲ್ ಬಳಿ ಮುಂಜಾನೆ 5ರ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Accident Police case Death Electronic city


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ