ಭೀಕರ ರಸ್ತೆ ಅಪಘಾತ – 11 ಮಂದಿ ದುರ್ಮರಣ

Road Accident: 11 people dead

03-07-2019

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕು ಮುರುಗಮಲ್ಲ ಬಳಿ ಖಾಸಗಿ ಬಸ್ ಮತ್ತು ಟಾಟಾ ಏಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅವಘಡದಲ್ಲಿ ಸ್ಥಳದಲ್ಲೇ 11 ಮಂದಿ ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಚಿಂತಾಮಣಿ, ಕೋಲಾರ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಮುರುಗಮಲ್ಲದಿಂದ ಚಿಂತಾಮಣಿ ಕಡೆ ಬರುತ್ತಿದ್ದ ಖಾಸಗಿ ಬಸ್ ಹಾಗೂ ಚಿಂತಾಮಣಿಯಿಂದ ಮುರುಗಮಲ್ಲ ಕಡೆ ಹೋಗುತ್ತಿದ್ದ ಟಾಟಾ ಎಸ್ ನಡುವೆ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಚಿಂತಾಮಣಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Road Accident Chikkaballapura Dead Kolar


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ