ಕಾಂಗ್ರೆಸ್ನ ಹೊಸ ಅಧ್ಯಕ್ಷರನ್ನು ಬೇಗ ಹುಡುಕಿ: ರಾಹುಲ್ ಗಾಂಧಿ

Rahul Gandhi Statement

03-07-2019

ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನ ಬಳಿಕ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ಸಲ್ಲಿಸಿದ್ದು, ಅದನ್ನು ವಾಪಸ್ ಪಡೆಯುವ ಯಾವುದೇ ಇರಾದೆ ಇಲ್ಲ ಎಂದು ಮತ್ತೆ ಸ್ಪಷ್ಟಪಡಿಸಿದ್ದಾರೆ. ನಿನ್ನೆ ಕಾಂಗ್ರೆಸ್ ಆಡಳಿತಾರೂಢ ರಾಜ್ಯಗಳ ಮುಖ್ಯಮಂತ್ರಿಗಳನ್ನು ಭೇಟಿಯಾಗಿರುವ ರಾಹುಲ್, ಕಾಂಗ್ರೆಸ್ ಅಧ್ಯಕ್ಷ ಸ್ಥಾನದಲ್ಲಿ ಕೂರುವಂಥ ವ್ಯಕ್ತಿಯನ್ನು ಸೂಚಿಸಿ ಎಂದಿದ್ದಾರೆ.

ಮುಖ್ಯಮಂತ್ರಿಗಳಾದ ಗೆಹ್ಲೋಟ್, ನಾಥ್, ಚತ್ತೀಸ್ ಗಢದ ಭೂಪೇಶ್ ಬಾಘೇಲ್, ಪಂಜಾಬ್ ನ ಅಮರೀಂದರ್ ಸಿಂಗ್, ಪುದುಚೇರಿಯ ವಿ ನಾರಾಯಣಸಾಮಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ತಾನು ಈಗಾಗಲೇ ರಾಜೀನಾಮೆ ಸಲ್ಲಿಸಿದ್ದು, ತುಂಬಾ ದಿನಗಳ ಕಾಲ ಇದೇ ಸ್ಥಾನದಲ್ಲಿ ಮುಂದುವರಿಯಲು ಸಾಧ್ಯವಿಲ್ಲ. ಹೀಗಾಗಿ ಆದಷ್ಟು ಬೇಗ ಹೊಸ ಕಾಂಗ್ರೆಸ್ ಅಧ್ಯಕ್ಷರನ್ನು ನೇಮಿಸಬೇಕಿದೆ ಎಂದು ರಾಹುಲ್ ಹೇಳಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Rahul Gandhi AICC Congress CM


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ