ಇನ್ನು ಪ್ರಾದೇಶಿಕ ಭಾಷೆಯಲ್ಲೇ ಬ್ಯಾಂಕಿಂಗ್ ಪರೀಕ್ಷೆ

Banking Exam to be held in regional language

04-07-2019

ರಾಜ್ಯದ ಜನರ ಬಹುದಿನದ ಬೇಡಿಕೆಯಾದ ಆಯಾ ಪ್ರಾದೇಶಿಕ ಭಾಷೆಯಲ್ಲಿಯೇ ಪ್ರಾದೇಶಿಕ ಗ್ರಾಮೀಣ ಬ್ಯಾಂಕಿಂಗ್ ಸೇವೆ ನೇರ ನೇಮಕಾತಿಗೆ ಕನ್ನಡದಲ್ಲಿಯೇ ಪರೀಕ್ಷೆ ಬರೆಯಲು ಕೇಂದ್ರ ಸರ್ಕಾರ ಅನುವು ಮಾಡಿಕೊಟ್ಟಿದೆ.

ಇಂದು ಸಂಸತ್ತಿನ ಅಧಿವೇಶನದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾತನಾಡಿ, ಈ ಬಗ್ಗೆ ವರದಿಯನ್ನು ಲೋಕಸಭಾಧ್ಯಕ್ಷರ ಗಮನಕ್ಕೆ ತಂದಿದ್ದಾರೆ. ಕನ್ನಡ ಭಾಷೆಯನ್ನೊಳಗೊಂಡ ಒಟ್ಟು ಪ್ರಾದೇಶಿಕ ಭಾಷೆಗಳನ್ನು ಈ ಸೌಲಭ್ಯಕ್ಕೆ ಒಳಪಡಿಸಲಾಗಿದೆ. ಬ್ಯಾಂಕಿಂಗ್ ಸೇವೆಯಲ್ಲಿ ಪ್ರಾದೇಶಿಕ ಸಮಾನತೆ ಮತ್ತು ಯುವಕರಿಗೆ ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇನ್ನು ಈ ಬಗ್ಗೆ ಸಂತಸ ವ್ಯಕ್ತಪಡಿಸಿದ ಕೇಂದ್ರ ಸಚಿವ ಸದಾನಂದ ಗೌಡ, ಬಹುದಿನಗಳ ಬೇಡಿಕೆ ಈಡೇರಿದೆ ಎಂದಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Nirmala Sitaraman Regional Banking Exam Language


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ