ಗ್ರಹಚಾರ ಕೆಟ್ಟು ಬ್ಯಾಂಕ್ ನಲ್ಲಿ ಸಿಕ್ಕಿಬಿದ್ದ ವಂಚಕರು!

Police case

05-07-2019

ಬೆಂಗಳೂರು: ವಂಚನೆ ನಡೆಸಿದ್ದ ಬರೋಬ್ಬರಿ 3 ಕೋಟಿ ರೂಗಳನ್ನು ಬ್ಯಾಂಕ್‍ವೊಂದರಿಂದ ಡ್ರಾ ಮಾಡಿದ್ದ ಮೂವರು ಖದೀಮರು ಬೇರೆ ಬ್ಯಾಂಕ್‍ಗೆ ಹಣ ಹಾಕಲು ಹೋಗಿ ಬ್ಯಾಂಕ್ ಮ್ಯಾನೇಜರ್‍ನ ಸಮಯ ಪ್ರಜ್ಞೆಯಿಂದ ನೆಲಮಂಗಲ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಹಣ ಹಾಕಲು ಬಂದಿದ್ದ ದಾವಣಗೆರೆ ಜಿಲ್ಲೆಯ ಹರಿಹರ ಮೂಲದ ಪರಿಶಿತ್ ನಾಯ್ಡು, ಗುರು ಮತ್ತು ರಂಗಸ್ವಾಮಿಯನ್ನು ನೆಲಮಂಗಲ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮೂವರು ಆರೋಪಿಗಳು ಕೋಟಿಗಟ್ಟಲೆ ಹಣವನ್ನು ಬ್ಯಾಂಕ್‍ಗೆ ಕಟ್ಟಲು ನಂಬರ್ ಇಲ್ಲದ ಹೊಸ ಸ್ಕೋಡಾ ಕಾರಿನಲ್ಲಿ ನೆಲಮಂಗಲದ ಐಸಿಐಸಿಐ ಬ್ಯಾಂಕ್‍ಗೆ ಬಂದಿದ್ದರು.

ಹಣ ನೋಡಿ ಐಸಿಐಸಿಐ ಬ್ಯಾಂಕ್ ಮ್ಯಾನೇಜರ್ ಆತಂಕಗೊಂಡು ತಕ್ಷಣ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ನೆಲಮಂಗಲ ಟೌನ್ ಪೊಲೀಸರು ಮೂವರನ್ನು ವಶಕ್ಕೆ ಪಡೆದ ಹಣ ಯಾರಿಗೆ ಸೇರಿದ್ದು ಎಂದು ವಿಚಾರಣೆ ಶುರು ಮಾಡಿದ್ದಾರೆ. ಆರೋಪಿಗಳು ಮೂರು ದೊಡ್ಡ ಬ್ಯಾಗಿನಲ್ಲಿ ಹಣವನ್ನು ತಂದಿದ್ದರು. ಈ ಮೂವರು ಆನ್ ಲೈನ್ ಮೂಲಕ ವಂಚನೆ ಮಾಡಿ ಬರೋಬ್ಬರಿ 3 ಕೋಟಿ ಹಣವನ್ನು ರಾಮಮೂರ್ತಿನಗರದ ಐಸಿಐಸಿಐ ಬ್ಯಾಂಕಿನಿಂದ ಡ್ರಾ ಮಾಡಿದ್ದರು. ಡ್ರಾ ಮಾಡಿದ್ದ ಹಣವನ್ನು ಬೇರೆ ಅಕೌಂಟ್‍ಗೆ ಹಾಕಲು ಬಂದಿದ್ದಾಗ ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡಿದ್ದಾರೆ. ಮೂವರ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದ್ದು, ಮೂವರು ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.


ಸಂಬಂಧಿತ ಟ್ಯಾಗ್ಗಳು

Thief Police Bank Money


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ