ದ್ವಿಚಕ್ರ ವಾಹನಕ್ಕೆ ಕ್ರೇನ್ ಡಿಕ್ಕಿ-ವಿದ್ಯಾರ್ಥಿ ಸಾವು

Accident

05-07-2019

ಬೆಂಗಳೂರು: ಭದ್ರಪ್ಪ ಲೇಔಟ್‍ನ ಬಿಇಎಲ್ ರಸ್ತೆಯಲ್ಲಿ  ಹಿಂದಿನಿಂದ ಬಂದ ಕ್ರೇನ್ ಡಿಕ್ಕಿ ಹೊಡೆದು ತ್ರಿಚಕ್ರ ಸ್ಕೂಟರ್‍ನಲ್ಲಿ ಹೋಗುತ್ತಿದ್ದ ಅಂಗವಿಕಲ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಬಿಎಲ್‍ನ ರೇವಂತ್ (20)ಎಂದು ಮೃತಪಟ್ಟವರನ್ನು ಗುರುತಿಸಲಾಗಿದೆ. ಸ್ಥಳೀಯ ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿದ್ದ ರೇವಂತ್ ನಿನ್ನೆ ಮಧ್ಯಾಹ್ನ 2 ಗಂಟೆ ವೇಳೆಗೆ ಕಾಲೇಜು ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದರು.

ಈ ವೇಳೆ ಹಿಂದಿನಿಂದ ಬಂದ ಕ್ರೇನ್ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ರೇವಂತ್‍ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪ್ರಕರಣ ದಾಖಲಿಸಿರುವ ಹೆಬ್ಬಾಳ ಸಂಚಾರ ಪೊಲೀಸರು ಕ್ರೇನ್‍ನನ್ನು ವಶಪಡಿಸಿಕೊಂಡು ಚಾಲಕನಿಗಾಗಿ ಶೋಧ ನಡೆಸಿದ್ದಾರೆ ಎಂದು ಡಿಸಿಪಿ ಸಾರಾ ಪಾತಿಮಾ ತಿಳಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Accident Death Student Bengaluru


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ