ವಿಷ ಸೇವಿಸಿ ಪ್ರೇಮಿಗಳ ಆತ್ಮಹತ್ಯೆ

Lovers Suicide

05-07-2019

ಬೆಂಗಳೂರು: ಮನೆಯವರ ವಿರೋಧ ಕಟ್ಟಿಕೊಂಡು ಮದುವೆಯಾಗಲು ಮುಂದಾಗಿದ್ದ ತಮಿಳುನಾಡಿನ ಪ್ರೇಮಿಗಳು ನಗರದ ಹೊರವಲಯದ ಮಾದನಾಯ್ಕನಹಳ್ಳಿ ಪೊಲೀಸ್ ಠಾಣಾ ವ್ಯಾಫ್ತಿಯ ಗೋಲ್ಡನ್‍ಫಾಮ್ ರೆಸಾರ್ಟ್‍ನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮಿಳುನಾಡಿನ ಧರ್ಮಪುರಿ ಮೂಲದ ಶ್ರೀನಿವಾಸ್(34)  ಸತ್ಯಜ್ಯೋತಿ(28) ಎಂದು ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳನ್ನು ಗುರುತಿಸಲಾಗಿದ್ದು ಕೃತ್ಯವು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಇವರಿಬ್ಬರುಬ ಕಳೆದ ಐದಾರು ವರ್ಷಗಳಿಂದ ಪ್ರೀತಿಸುತ್ತಿದ್ದರು. ಮನೆಯವರ ಬಳಿ ಮದುವೆ ವಿಚಾರ ಪ್ರಸ್ತಾಪ ಮಾಡಿದಾಗ, ಇಬ್ಬರ ಮನೆಯಲ್ಲೂ ವಿರೋಧ ವ್ಯಕ್ತವಾಗಿತ್ತು. ಕಳೆದ ಜು.3ರಂದು ರಾತ್ರಿ ಬೆಂಗಳೂರಿಗೆ ಬಂದಿದ್ದರು. ಯುವ ಜೋಡಿಗಳು ಬೆಂಗಳೂರಿನ ಪ್ರತಿಷ್ಟಿತ ಗೋಲ್ಡನ್‍ಫಾಮ್ ರೆಸಾರ್ಟ್‍ನಲ್ಲಿ ರಾತ್ರಿ 8ಕ್ಕೆ ರೂಂ ಬುಕ್ ಮಾಡಿಕೊಂಡಿದ್ದರು. ರಾತ್ರಿ ಊಟ ಮಾಡಿ, ಡೆತ್ ನೋಟ್ ಬರೆದಿಟ್ಟು ನಂತರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾದನಾಯ್ಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Lovers Police case Suicide Poison


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ