ಡಿಕೆಶಿಗೆ ಎಐಸಿಸಿ ಅಧ್ಯಕ್ಷಗಿರಿ - ಜನರ ಒಲವು

Who will become AICC President

05-07-2019

ಲೋಕಸಭೆಯಲ್ಲಿ ಹೀನಾಯ ಸೋಲಿನ ಬಳಿಕ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದ್ದು, ಯಾವುದೇ ಕಾರಣಕ್ಕೂ ರಾಜೀನಾಮೆ ವಾಪಸ್ ಪಡೆಯೋದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ಯಾರನ್ನು ಹುಡುಕುವುದು ಎಂಬುದಾಗಿ ಕಾಂಗ್ರೆಸ್ ತಲೆಕೆಡಿಸಿಕೊಂಡಿದೆ.

ಈ ಮಧ್ಯೆ ಎಐಸಿಸಿ ಅಧ್ಯಕ್ಷ ಸ್ಥಾನದಲ್ಲಿ ಯಾರು ಕೂರಬಹುದು ಎಂಬುದಾಗಿ ಸಮೀಕ್ಷೆಯೊಂದು ನಡೆದಿದ್ದು ಅದರಲ್ಲಿ ಕರ್ನಾಟಕದ ಸಚಿವ ಡಿ.ಕೆ.ಶಿವಕುಮಾರ್ ಸಂಭಾವ್ಯರಾಗಿದ್ದಾರೆ. ಈ ಸರ್ವೆಯಲ್ಲಿ 14,068 ಮತಗಳು ಬಂದಿದ್ದು, ಅದರಲ್ಲಿ ಡಿಕೆ ಶಿವಕುಮಾರ್ ಅವರಿಗೆ ಶೇ. 14 ರಷ್ಟು ಮತಗಳು ಬಂದಿವೆ. ಇನ್ನು ಪ್ರಿಯಾಂಕಾ ಗಾಂಧಿ ಶೇ.17 ರಷ್ಟು ಮತಗಳನ್ನು ಪಡೆದಿದ್ದಾರೆ. ಇನ್ನು ಪಂಜಾಬ್ ಸಿಎಂ ಅಮರೀಂದರ್ ಸಿಂಗ್, ಶೇ.36, ಸಚಿನ್ ಪೈಲಟ್ ಶೇ.33 ರಷ್ಟು ಮತಗಳನ್ನು ಪಡೆದಿದ್ದಾರೆ.


ಸಂಬಂಧಿತ ಟ್ಯಾಗ್ಗಳು

DK Shivakumar Rahul Gandhi AICC President Survey


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ