ಇಂಧನ ಬೆಲೆ ಏರಿಕೆ: ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

congress protest against petrol price hike

06-07-2019

ಬೆಂಗಳೂರು: ಕೇಂದ್ರ ಸರ್ಕಾರ 2019-20ರ ಬಜೆಟ್‍ನಲ್ಲಿ ಡೀಸೆಲ್, ಪೆಟ್ರೋಲ್ ಬೆಲೆ ಏರಿಸಿದೆ ಮತ್ತು ಈ ಮೂಲಕ ನಿರುದ್ಯೋಗ ನಿವಾರಣೆಗೆ ಯಾವುದೇ ಯೋಜನೆ ರೂಪಿಸಿಲ್ಲ. ಜನರಿಗೆ ಉಪಯೋಗವಿಲ್ಲದ ಬಜೆಟ್ ಮಂಡಿಸಲಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

ನಿನ್ನೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದ 2019ರ ಕೇಂದ್ರ ಬಜೆಟ್ ನಲ್ಲಿ, ವಾಹನಗಳ ಇಂಧನಗಳ ಮೇಲಿನ ಅಬಕಾರಿ ಸುಂಕ ಮತ್ತು ಮೂಲಸೌಕರ್ಯ ಸೆಸ್ ಅನ್ನು ಏರಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ದೇಶಾದ್ಯಂತ ಇಂಧನ ಬೆಲೆಯಲ್ಲಿ 2.4 ರೂಪಾಯಿಯಿಂದ 2.65 ರೂಪಾಯಿಯವರೆಗೆ ಏರಿಕೆಯಾಗಿದೆ.  


ಸಂಬಂಧಿತ ಟ್ಯಾಗ್ಗಳು

petrol price hike Union budget protest Congress


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ