ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಂದ, ಪ್ರಧಾನಿ ಗೆ ಪತ್ರ !

Kannada News

10-06-2017

ಬೆಂಗಳೂರು:- ಗೋ ಹತ್ಯೆ ನಿಷೇಧ ಕುರಿತು ಸಾಕಷ್ಟು ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನಲೆ, ಮೊನ್ನೆಯಷ್ಟೆ ಕೇಂದ್ರ ಸರ್ಕಾರದ ನೀತಿ ವಿರೋಧಿಸಿ ಕೇರಳದ ಮುಖ್ಯ ಮಂತ್ರಿ ಇದರ ವಿರುದ್ಧ ಪತ್ರ ಬರೆದಿದ್ದು, ಇದೀಗ ಕರ್ನಾಟಕದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರದ ಮೂಲಕ ವಿರೋಧ ವ್ಯಕ್ತಪಡಿಸಿದ್ದಾರೆ. ದೇಶದ ಎಲ್ಲಾ ರಾಜ್ಯಗಳ ಮೇಲೆ ಏಕಾಏಕಿ ಈ ನಿರ್ಧಾರ ಅಸಂವಿಧಾನಿಕವಾಗಿದೆ, ಈ ಕುರಿತು ಮತ್ತೋಮ್ಮೆ ಚರ್ಚಿಸಿ ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಪ್ರಾಣಿಗಳ ವಿರುದ್ಧ ಕ್ರೌರ್ಯ ವಿಚಾರದಲ್ಲಿ ಕೇಂದ್ರ ಸರ್ಕಾರ, ಕಾಯಿದೆಯ ನಿಯಮಗಳನ್ನು ಗಾಳಿಗೆ ತೂರಿದೆ ಎಂದರು. ಕೇವಲ ಕರ್ನಾಟಕದಲ್ಲಿ ಮಾತ್ರವಲ್ಲದೆ ಕೇರಳ ಮತ್ತು ಈಶಾನ್ಯ ರಾಜ್ಯಗಳಲ್ಲಿ ವಿರೋಧ ವ್ಯಕ್ತವಾಗುತ್ತಿದೆ ಎಂದರು. ಪರೋಕ್ಷವಾಗಿ ಸಂವಿಧಾನದ ವಿಧಿ 301 ಮತ್ತು 302 ಗಳನ್ನು ಕೇಂದ್ರ ಸರ್ಕಾರದ ನೀತಿ ವಿರೋಧಿಸುತ್ತಿವೆ, ಎಂದು ಸಂವಿಧಾನದ ಆಧಾರವಾಗಿ ತಿಳಿಸಿದ್ದು. ಕೇಂದ್ರ ಸರ್ಕಾರದ ಈ ಕಾನೂನಿಂದ ಲಕ್ಷಾಂತರ ರೈತರಿಗೆ ಮತ್ತು ದೇಶದ ಆರ್ಥಿಕತೆಗೆ ಹೊಡೆತ ಬೀಳಲಿದೆ ಎಂದಿದ್ದಾರೆ. ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪತ್ರದ ಮೂಲಕ ನಾವು ಯಾವ ಆಹಾರವನ್ನು ಸೇವಿಸಬೇಕು ಎಂಬುದರ ಬಗ್ಗೆ ಕೇಂದ್ರ ಸರ್ಕಾರದಿಂದ ಯಾವುದೇ ಪಾಠ ಬೇಕಾಗಿಲ್ಲ ಎಂದು ವಾಗ್ದಾಳಿ ನಡೆಸಿದ್ದರು. ಈಗ ಕೇಂದ್ರ ಸರ್ಕಾರಕ್ಕೆ ಸಿದ್ದರಾಮಯ್ಯ ನವರು ಪತ್ರದ ಮೂಲಕ ವಿರೋಧ ವ್ಯಕ್ತಪಡಿಸಿದ್ದಾರೆ.                 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ