ರಾಮಲಿಂಗಾರೆಡ್ಡಿ – ಎಚ್ಡಿಕೆ ರಹಸ್ಯ ಸ್ಥಳದಲ್ಲಿ ಮಾತುಕತೆ

Karnataka Government in crisis

08-07-2019

ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಕೂಟದ ಶಾಸಕರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಇಂದು ಬಂಡಾಯ ಶಾಸಕ ರಾಮಲಿಂಗಾರೆಡ್ಡಿ ಮತ್ತು ಸಿಎಂ ಎಚ್‍.ಡಿ.ಕುಮಾರಸ್ವಾಮಿ ರಹಸ್ಯ ಸ್ಥಳದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಪ್ರಸ್ತುತ ಸಮಸ್ಯೆಗೆ ಕಾರಣಗಳೇನು? ಸರ್ಕಾರವನ್ನು ಬಿಕ್ಕಟ್ಟಿನಿಂದ ಪಾರು ಮಾಡಲು ಬಂಡಾಯ ಶಾಸಕರ ಬೇಡಿಕೆಗಳೇನು? ಎಂಬ ಕುರಿತು ಉಭಯ ನಾಯಕರು ಚರ್ಚಿಸುವ ಸಾಧ್ಯತೆ ಇದೆ. ಬೆಂಗಳೂರಿನ ರಾಜಾಜಿ ನಗರ ಶಾಸಕ ಮುನಿರತ್ನ, ಮಹಾಲಕ್ಷಿ ಲೇಔಟ್‍ ಶಾಸಕ ಗೋಪಾಲಯ್ಯ, ಕೆ ಆರ್ ಪುರಂನ ಭೈರತಿ ಬಸವರಾಜ್, ಯಶವಂತಪುರದ ಶಾಸಕ ಎಸ್‍.ಟಿ.ಸೋಮಶೇಖರ್ ಮತ್ತು ಬಿಟಿಎಂ ಶಾಸಕ ರಾಮಲಿಂಗಾರೆಡ್ಡಿ ಸೇರಿದಂತೆ ಒಟ್ಟು 14 ಶಾಸಕರು ರಾಜೀನಾಮೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಉಭಯ ನಾಯಕರ ಮಾತುಕತೆ ಕುತೂಹಲ ಕೆರಳಿಸಿದೆ.


ಸಂಬಂಧಿತ ಟ್ಯಾಗ್ಗಳು

Ramalingareddy Congress HDK Government


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ